ಬೆಳಗಾವಿ: ‘ಸರ್ಕಾರದಿಂದ ಆದೇಶಿಸಲ್ಪಟ್ಟ ಮಹತ್ವದ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ವಿವಿಧ ಸ್ತರದ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಅವಧಿಯೊಳಗೆ ಕಾರ್ಯವನ್ನು ಪೂರ್ಣಗೊಳಿಸಲೇಬೇಕು’ ಎಂದು ಮಹಾನಗರ ಪಾಲಿಕೆ ಆಯುಕ್ತ ಎಂ.ಕಾರ್ತಿಕ್ ಎಲ್ಲ ಚಾರ್ಜ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಾಲಿಕೆಯಲ್ಲಿ ಸೋಮವಾರ ನಡೆದ ಗಣತಿ ಕಾರ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ0 ಮಾತನಾಡಿದ ಅವರು, ‘ಗಣತಿದಾರರ ಕಾರ್ಯ ವೇಗ ಪಡೆಯಲು ವಿವಿಧ ಸ್ತರದ ಮೇಲಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರ ಸಂಪರ್ಕ ಮತ್ತು ಸಮನ್ವಯತೆಯಿಂದ ಮೇಲ್ವಿಚಾರಣೆ ಮಾಡಬೇಕು’ ಎಂದು ಹೇಳಿದರು.

‘ನಿಧಾನವಾಗಿರುವ ಬ್ಲಾಕ್ ಸಮಸ್ಯೆ ಬಗೆಹರಿಸಿ ಚುರುಕಿನಿಂದ ಕಾರ್ಯ ವಾಗುವಂತೆ ನೋಡಿಕೊಳ್ಳಬೇಕು. ನನಗೂ ಸೇರಿದಂತೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಪ್ರತಿನಿತ್ಯ ಸಂಜೆ ವರದಿ ನೀಡುವುದು ಕಡ್ಡಾಯವೆಂದ ಅವರು, ನೆಪ ಹೇಳದೆ ಸಿಬ್ಬಂದಿ ತಮಗೆ ವಹಿಸಿದ ಕಾರ್ಯಗಳನ್ನು ತ್ವರಿತವಾಗಿ ನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿ ವಿಳಂಬ ಮಾಡಿದರೆ ಕ್ರಮ ಖಚಿತ’ ಎಂಬ ಎಚ್ಚರಿಕೆಯನ್ನೂ ನೀಡಿದರು.

ಅವಧಿ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳಿಸಿದ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಅವರು, ‘ಶೀಘ್ರವಾಗಿ ಅಂತಹ ಸಿಬ್ಬಂದಿಗೆ ಅಭಿನಂದನಾ ಪತ್ರ ನೀಡಿ ಗೌರವಿಸುವ ಕಾರ್ಯವನ್ನು ಹಮ್ಮಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ಉಪ ಆಯುಕ್ತ (ಕಂದಾಯ), ನಗರ ಗಣತಿ ಅಧಿಕಾರಿ ಡಾ.ಸಿದ್ದು ಹುಲ್ಲೋಳಿ ಹಾಗೂ ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ಬಿ.ಟಿ. ಅವರು, ಗಣತಿಯ ಎಲ್ಲ ಚಾರ್ಜ್ ಅಧಿಕಾರಿಗಳು ಕಾರ್ಯದ ಪ್ರಗತಿಯ ಮಾಹಿತಿ ನೀಡಿದರು. ಸಭೆಯಲ್ಲಿ ಗಣತಿ ವಿಭಾಗದ ಎಲ್ಲ ಚಾರ್ಜ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-21-431553420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.