ಬೆಳಗಾವಿ: ಇಲ್ಲಿನ ಟಿಳಕವಾಡಿಯ ಮಂಗಳವಾರ ಪೇಟೆಯಲ್ಲಿ ಮನೆಯ ಆಸ್ತಿಗಾಗಿ ಮೈದುನ ತನ್ನ ಅತ್ತಿಗೆಯನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಗವಳಿ ಸಮುದಾಯದವರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ಟಿಳಕವಾಡಿಯ ಮಂಗಳವಾರ ಪೇಟೆಯಿಂದ ನಗರ ಪೊಲೀಸ್ ಕಮಿಷನರ್ ಕಚೇರಿ, ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ‘ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಮಹಿಳೆ ಸಾವಿಗೆ ನ್ಯಾಯ ಸಿಗಬೇಕು’ ಎಂದು ಘೋಷಣೆ ಕೂಗಿದರು.

‘ಗೀತಾ ದಾವಲೆ ಗವಳಿ(45) ಎಂಬುವರನ್ನು ಮೈದುನ ಗಣೇಶ ದಾವಲೆ ಗವಳಿ ಹತ್ಯೆ ಮಾಡಿದ್ದಾನೆ. ಪೊಲೀಸ್ ವಶದಲ್ಲಿ ಇದ್ದಾಗಲೇ ಇನ್ನೂ ಮೂವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಕೊಲೆಗೆ ಪಿತೂರಿ ಮಾಡಿದ ಆತನ ಪತ್ನಿ, ಪುತ್ರರು ಮತ್ತು ಕುಟುಂಬದ ಇತರೆ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.

‘ಈ ಹಿಂದೆ ಗಣೇಶ ವಿರುದ್ಧ ದೂರು ನೀಡಲು ಟಿಳಕವಾಡಿ ಠಾಣೆಗೆ ಹೋದಾಗ, ಕೆಲವು ಪೊಲೀಸರು ಸ್ಪಂದಿಸಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಆರೋಪಿಸಿದರು.

ನಗರ ಪೊಲೀಸ್ ಉಪ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ನಾರಾಯಣ ಭರಮನಿ, ‘ಈ ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ. ಕೊಲೆಯಲ್ಲಿ ಆರೋಪಿಯ ಕುಟುಂಬ ಸದಸ್ಯರೂ ಭಾಗಿಯಾಗಿದ್ದು ಕಂಡುಬಂದರೆ, ಅವರನ್ನು ಬಂಧಿಸುತ್ತೇವೆ’ ಎಂದು ಭರವಸೆ ಕೊಟ್ಟರು.

ಪಾಲಿಕೆ ಸದಸ್ಯ ನಿತಿನ ಜಾಧವ, ಮಾಜಿ ಉಪಮೇಯರ್ ಧನರಾಜ ಗವಳಿ, ರವಿಕುಮಾರ ಕೋಕಿತಕರ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ರೈಲು ನಿಲ್ದಾಣಕ್ಕೆ ಮರು ನಾಮಕರಣಕ್ಕೆ ವಿರೋಧ

ಬೆಳಗಾವಿ: ಬೆಂಗಳೂರಿನ ಶಿವಾಜಿ ನಗರದ ಮೆಟ್ರೋ ರೈಲು ನಿಲ್ದಾಣಕ್ಕೆ ಸೇಂಟ್ ಮೇರೀಸ್ ರೈಲು ನಿಲ್ದಾಣವೆಂದು ಮರುನಾಮಕರಣ ಮಾಡುವ ಕುರಿತ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ, ಹಮಾರಾ ದೇಶ ಸಂಘಟನೆ ಮತ್ತು ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯವರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಶಿವಾಜಿ ಮಹಾರಾಜರು ಹಿಂದೂ ಧರ್ಮಕ್ಕಾಗಿ ಹೋರಾಡಿದ್ದಾರೆ. ಈಗ ನಿಲ್ದಾಣದ ಹೆಸರು ಬದಲಿಸುವುದು ಅವರಿಗೆ ಮಾಡುವ ಅಪಮಾನ. ಹಾಗಾಗಿ ಮರುನಾಮಕರಣದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಮುಖಂಡ ರಮಾಕಾಂತ ಕೊಂಡೂಸ್ಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.