ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಎಂ.ಜಿ. ಹಿರೇಮಠ ಅಧಿಕಾರ ಸ್ವೀಕಾರ

Last Updated 30 ಜೂನ್ 2020, 13:51 IST
ಅಕ್ಷರ ಗಾತ್ರ

ಬೆಳಗಾವಿ: ನೂತನ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರ ಹಸ್ತಾಂತರಿಸಿದರು.

‘ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ನಾನು ಮೂಲತಃ ಇದೇ ಜಿಲ್ಲೆಯವನಾಗಿರುವುದರಿಂದ ಕೆಲಸ ಸುಲಭವಾಗಲಿದೆ’ ಎಂದು ಹಿರೇಮಠ ಹೇಳಿದರು.

‘ಗದಗ ಜಿಲ್ಲೆಯಲ್ಲಿ ಪ್ರವಾಹ, ಕೊರೊನಾ, ಬರ ಸೇರಿದಂತೆ ಎಲ್ಲ ಪರಿಸ್ಥಿತಿಯನ್ನು ನಿಭಾಯಿಸಿದ ಅನುಭವವಿದೆ. ಅದು ಇಲ್ಲಿ ಸಹಕಾರಿಯಾಗಲಿದೆ’ ಎಂದರು.

ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಬೊಮ್ಮನಹಳ್ಳಿ ಕೃತಜ್ಞತೆ ಸಲ್ಲಿಸಿದರು.

ಪರಿಚಯ: ಮಹಾಂತೇಶ ಜಿ. ಹಿರೇಮಠ ಅವರು ಬೈಲಹೊಂಗಲ ತಾಲ್ಲೂಕಿನ ಗೋಣಿಕೊಪ್ಪದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ(ಭೌತಶಾಸ್ತ್ರ) ಪದವೀಧರರಾದ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಕೆಲಕಾಲ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

1991ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿ ಸರ್ಕಾರಿ ಸೇವೆ ಆರಂಭಿಸಿದ ಅವರು, ಸೇವೆಯಲ್ಲಿ ಬಡ್ತಿ ಪಡೆದು 2015ರ ಜೂನ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯಿಂದ ಭಾರತೀಯ ಆಡಳಿತ ಸೇವೆಗೆ (2010ರ ತಂಡ) ಸೇರ್ಪಡೆಯಾದರು.

ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ, ಹುಬ್ಬಳ್ಳಿ-ಧಾರವಾಡದ ಬಿ‌ಆರ್‌ಟಿಎಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. 2018ರ ಆಗಸ್ಟ್‌ನಿಂದ ಇಲ್ಲಿಯವರೆಗೆ ಗದಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT