ಬೆಳಗಾವಿ: ‘ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಿನಲ್ಲಿ ಹರಿದಾಡಿದ ನಕಲಿ ಹೂಡಿಕೆ ಜಾಹೀರಾತು ನಂಬಿದ ವೃದ್ಧರೊಬ್ಬರು ₹7.38 ಲಕ್ಷ ವಂಚನೆಗೆ ಒಳಗಾಗಿದ್ದಾರೆ.

ವಂಟಮುರಿ ಕಾಲೊನಿಯ ಪ್ರಕಾಶ ಗುಬ್ಬಿ (76) ವಂಚನೆಗೊಳಗಾದವರು. ಕೊಲ್ಹಾಪುರ ಮೂಲದ ಆದರ್ಶ ಹಾಗೂ ಬುಲ್ಡಾಣಾದ ದಾಮೋರ ಎಂಬುವರ ವಿರುದ್ಧ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರು ತಿಂಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ.

‘ವಂಚಕರು ನಕಲಿ ಜಾಹೀರಾತು ಸಿದ್ಧಪಡಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿದ್ದರು. ಜಾಹೀರಾತಿನಲ್ಲಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ ಪ್ರಕಾಶ ಅವರು ತಮ್ಮ ವಿವರಗಳನ್ನು ನೋಂದಾಯಿಸಿಕೊಂಡಿದ್ದರು. ಬಳಿಕ ವಂಚಕರು ಸಂಪರ್ಕಿಸಿ ಮೊದಲು ಫೋನ್ಪೇ ಮೂಲಕ ₹16,500 ಪಾವತಿಸಲು ಸೂಚಿಸಿದ್ದರು. ಮತ್ತೆ ಕರೆ ಮಾಡಿ, ಹೂಡಿಕೆಗೆ ಲಾಭ ಬಂದಿಲ್ಲ ಎಂದು ಹೇಳಿ ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಪ್ರಕಾಶ ಅವರು ಹಂತ ಹಂತವಾಗಿ ಒಟ್ಟು ₹7.38 ಲಕ್ಷ ಆರ್ಟಿಜಿಎಸ್ ಮೂಲಕ 2025ರ ನವೆಂಬರ್ನಲ್ಲಿ ವರ್ಗಾವಣೆ ಮಾಡಿದ್ದಾರೆ. ಈವರೆಗೂ ಯಾವುದೇ ಲಾಭದ ಹಾಣ ದೊರಕದೇ ಹೂಡಿಕೆ ಮಾಡಿದ ಹಣವೂ ವಾಪಸ್ ಸಿಗದ ಹಿನ್ನೆಲೆಯಲ್ಲಿ ತಾವು ವಂಚನೆಗೆ ಒಳಗಾಗಿರುವುದು ತಿಳಿದು ದೂರು ದಾಖಲಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-42-827203551

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.