ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಮನೆ ಬಿಟ್ಟು ಹೋಗಿದ್ದ ಜೋಡಿ ಪೊಲೀಸರ ಮುಂದೆ ಹಾಜರ್‌

Published 12 ಡಿಸೆಂಬರ್ 2023, 14:44 IST
Last Updated 12 ಡಿಸೆಂಬರ್ 2023, 14:44 IST
ಅಕ್ಷರ ಗಾತ್ರ

ಬೆಳಗಾವಿ: ಭಾನುವಾರ ತಡರಾತ್ರಿ ಮನೆ ಬಿಟ್ಟು ಹೋಗಿದ್ದ ಹೊಸ ವಂಟಮೂರಿಯ ಪ್ರೇಮಿಗಳು ಮಂಗಳವಾರ ಸಂಜೆ ಬೆಳಗಾವಿ ಪೊಲೀಸ್‌ ಆಯುಕ್ತರ ಕಚೇರಿಗೆ ಬಂದರು. ‘ನಮಗೆ ಪ್ರಾಣ ಬೆದರಿಕೆ ಇದೆ ರಕ್ಷಣೆ ಕೊಡಿ’ ಎಂದು ಪ್ರೇಮಿಗಳು ಪೊಲೀಸರ ಮೊರೆ ಹೋದರು.

ಹೊಸ ವಂಟಮೂರಿಯ ದುಂಡಪ್ಪ ಗಡ್ಕರಿ (24) ಹಾಗೂ ಪ್ರಿಯಾಂಕ (22) ಪ್ರೀತಿಸುತ್ತಿದ್ದರು. ಪ್ರಿಯಾಂಕ ಮನೆಯವರು ಇವರಿಬ್ಬರ ಪ್ರೀತಿ ಒಪ್ಪದೇ, ಬೇರೊಬ್ಬ ವರನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಸೋಮವಾರ (ಡಿ.11) ಪ್ರಿಯಾಂಕ ಅವರಿಗೆ ‘ಯಾದಿ ಮೇ ಶಾದಿ’ ಪದ್ಧತಿಯಲ್ಲಿ ಮದುವೆ ಮಾಡಲು ಸಿದ್ಧತೆ ನಡೆಸಿದ್ದರು. ಆದರೆ, ಭಾನುವಾರ ರಾತ್ರಿಯೇ ದುಂಡಪ್ಪ– ಪ್ರಿಯಾಂಕ ಮನೆ ಬಿಟ್ಟು ಓಡಿಹೋಗಿದ್ದರು. ಇದರಿಂದ ಸಿಟ್ಟಿಗೆದ್ದ ಯುವತಿಯ ಪಾಲಕರು ಹಾಗೂ ಸಂಬಂಧಿಕರು ಸೇರಿಕೊಂಡು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ, ವಿದ್ಯುತ್‌ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT