ಬೆಳಗಾವಿ: ‘ಪರಿಶಿಷ್ಟ ಪಂಗಡ(ತಳವಾರ ಸಮುದಾಯ) ಎಂದು ನಕಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವುದನ್ನು ತಡೆಗಟ್ಟಬೇಕು’ ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಮಾಜದ ಕಾರ್ಯಕರ್ತರು ಗುರುವಾರ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮುಂದೆ ಧರಣಿ ನಡೆಸಿದರು.

‘ವಾಲ್ಮೀಕಿ, ನಾಯಕ ಸಮುದಾಯ ಹೊರತುಪಡಿಸಿ, ಬೇರೆ ಸಮುದಾಯದವರೂ ಪರಿಶಿಷ್ಟ ಪಂಗಡ(ತಳವಾರ ಸಮುದಾಯ) ಎಂದು ಖೊಟ್ಟಿ ಜಾತಿಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಅವುಗಳನ್ನು ಪಡೆಯುತ್ತಿರುವವರು ಮತ್ತು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಕ್ಕೆ ₹1 ಸಾವಿರ ಕೋಟಿ ಅನುದಾನ ಕೊಡಬೇಕು’ ಎಂದು ಒತ್ತಾಯಿಸಿದರು.

ಯಾದಗಿರಿಯ ಮುಖಂಡ ಸಿದ್ಧಲಿಂಗಪ್ಪ ನಾಯಕ ಮಾತನಾಡಿ, ‘ನಕಲಿ ಜಾತಿ ಪ್ರಮಾಣಪತ್ರ ಪಡೆದವರು ಸರ್ಕಾರಿ ಸೌಲಭ್ಯ ಅನುಭವಿಸುತ್ತಿರುವ ಕಾರಣ, ವಾಲ್ಮೀಕಿ ಮತ್ತು ನಾಯಕ ಸಮುದಾಯದವರಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ ಪರಿಶಿಷ್ಟ ಪಂಗಡದ ಶಾಸಕರ ಮನೆ ಎದುರು ಪ್ರತಿಭಟನೆ ಮಾಡುತ್ತಿದ್ದೇವೆ. ನಮಗೆ ನ್ಯಾಯ ದೊರಕಿಸಿಕೊಡಲು ಶಾಸಕರು ವಿಧಾನಸಭೆಯಲ್ಲಿ ಧ್ವನಿ ಎತ್ತಬೇಕು ಎಂದು ಬಯಸುತ್ತೇವೆ’ ಎಂದು ಒತ್ತಾಯಿಸಿದರು.

‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ಸಮುದಾಯದ ಬೇಡಿಕೆಗಳನ್ನು ಈಡೇರಿಸಿಲ್ಲ’ ಎಂದು ದೂರಿದರು.

ಮುಖಂಡರಾದ ರಾಜಶೇಖರ ತಳವಾರ, ಮಾರೆಪ್ಪ ನಾಯಕ ಮಗದಂಪುರ, ಶ್ರವಣಕುಮಾರ ನಾಯಕ, ಆನಂದ ಪಟಾತ, ದಿನೇಶ ಬಾಗಡೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.