ಬೆಳಗಾವಿ: ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಘೋಷಿಸಬೇಕು. ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿಕೇಂದ್ರವಾಗಿಸಬೇಕು ಎಂದು ಒತ್ತಾಯಿಸಿ ನ.11ರಂದು ಸುವರ್ಣ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಹೇಳಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ನಡೆಯುವ ಸತ್ಯಾಗ್ರಹದಲ್ಲಿ ಉತ್ತರ ಕರ್ನಾಟಕದ ಚಿಂತಕರು, ಕನ್ನಡ ಹೋರಾಟಗಾರರು, ರೈತರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಬೇಕು’ ಎಂದರು.

ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ, ‘ರೈತರು ಪ್ರತಿ ಟನ್ ಕಬ್ಬಿಗೆ ₹3,500 ದರ ಕೇಳುತ್ತಿರುವುದು ಸಮಂಜಸವಾಗಿದೆ. ಈ ಬೇಡಿಕೆಗೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪಬೇಕು. ಅದಕ್ಕೆ ಪೂರಕವಾಗಿ ಸರ್ಕಾರ ಕ್ರಮ ವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಸಮಾಲೋಚನೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ಒತ್ತಾಯಿಸಿದರು.

ಪ್ರೊ.ಎ.ವೈ.ಪಂಗಣ್ಣವರ, ವಿ.ಜಿ.ನೀರಲಗಿಮಠ, ಸಂಜೀವ ಪೂಜಾರಿ, ಪ್ರವೀಣ ಪಾಟೀಲ, ಉದಯ ಕರಜಗಿಮಠ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.