ಭಾನುವಾರ, ನವೆಂಬರ್ 17, 2019
27 °C

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಮಳೆ

Published:
Updated:

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಬುಧವಾರವೂ ಮಳೆ ಮುಂದುವರಿದಿದೆ. ಬೆಳಗಾವಿ, ಬೈಲಹೊಂಗಲ, ಹಿರೇಬಾಗೇವಾಡಿ ಸೇರಿದಂತೆ ವಿವಿಧೆಡೆ ಮಳೆ ಸುರಿಯುತ್ತಿದೆ.

ಚಿಕ್ಕೋಡಿ ತಾಲ್ಲೂಕಿನಲ್ಲಿ ‌ಮತ್ತು ಮಹಾರಾಷ್ಟ್ರದ  ಘಟ್ಟ ಪ್ರದೇಶದಲ್ಲಿ ಸುರಿಯುತ್ತಿದ್ದ ಮಳೆಯ ಅಬ್ಬರ ತಗ್ಗಿದೆ.

ಇದರಿಂದಾಗಿ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಯಥಾಸ್ಥಿತಿಯಲ್ಲಿದೆ. ರಾಜಾಪುರ ಬ್ಯಾರೇಜ್ 74,900 ಕ್ಯುಸೆಕ್ ಹಾಗೂ ದೂಧಗಂಗಾ ನದಿಯಿಂದ 17,424 ಸೇರಿದಂತೆ ತಾಲ್ಲೂಕಿನ ಕಲ್ಲೋಳ ಬಳಿ‌ ಕೃಷ್ಣಾ ನದಿಗೆ ಒಟ್ಟು 92,324 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಪ್ರತಿಕ್ರಿಯಿಸಿ (+)