ಬೆಳಗಾವಿ: ಇಲ್ಲಿ ಶನಿವಾರ ರಾಜ್ಯೋತ್ಸವ ಮೆರವಣಿಗೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ಚಾಕು–ಜಂಬೆಗಳಿಂದ ಇರಿದ ಕಾರಣ ಗಾಯಗೊಂಡಿದ್ದ ಐವರು ಚೇತರಿಸಿಕೊಂಡಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

‘ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದೇವೆ’ ಎಂದು ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಇಬ್ಬರ ಬಂಧನ: ಬೆಳಗಾವಿಯಲ್ಲಿ ನಡೆದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ತಾಲ್ಲೂಕಿನ ಕೆ.ಕೆ.ಕೊಪ್ಪದ ಆದಿತ್ಯ ಬೆಂಡಿಗೇರಿ ಅವರನ್ನು ಅಡ್ಡಗಟ್ಟಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದಡಿ ಇಬ್ಬರನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಕೆ.ಕೊಪ್ಪದ ಕಿರಣ ಕುರುಬರ, ಅರುಣ ಕುರುಬರ ಬಂಧಿತರು. ಈ ಹಿಂದೆ ಆಗಿದ್ದ ತಂಟೆಯ ಹಳೇ ದ್ವೇಷಕ್ಕಾಗಿ ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಅವಾಚ್ಯ ಶಬ್ದ ಬಳಸಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಕೃತ್ಯಕ್ಕೆ ಬಳಸಿದ ಚಾಕು ವಶಕ್ಕೆ ಪಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.