ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದಲ್ಲಿ ಕಾಮಗಾರಿ ಪೂರ್ಣ: ಸಚಿವ ರಮೇಶ್‌ ಜಾರಕಿಹೊಳಿ ಆಶಯ

ಗಟ್ಟಿ ಬಸವಣ್ಣ ಕುಡಿಯುವ ನೀರು ಮತ್ತು ಜಲವಿದ್ಯುತ್ ಯೋಜನೆ ಅನುಷ್ಠಾನ ಕುರಿತು ಚರ್ಚೆ
Last Updated 18 ಮೇ 2020, 10:57 IST
ಅಕ್ಷರ ಗಾತ್ರ

ಬೆಳಗಾವಿ: ಗೋಕಾಕ ನಗರ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು ಗೋಕಾಕ ನಗರದ ಹೊರವಲಯದಲ್ಲಿ ಗಟ್ಟಿ ಬಸವಣ್ಣ ಜಲಾಶಯ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾದಿಂದ ಎಲ್ಲ ರೀತಿಯ ಅನುಮತಿ ಮತ್ತು ನೆರವು ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ನಗರದ ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಸೋಮವಾರ ನಡೆದ ಗಟ್ಟಿ ಬಸವಣ್ಣ ಯೋಜನೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಸಾಧ್ಯವಾದರೆ ಮುಂದಿನ ವರ್ಷದ ಜೂನ್ ವೇಳೆಗೆ ಗಟ್ಟಿ ಬಸವಣ್ಣ ಜಲಾಶಯ ಪೂರ್ಣಗೊಳ್ಳಬೇಕು.ಇದಕ್ಕೆ ಅಗತ್ಯವಿರುವ ಅರಣ್ಯ, ಪರಿಸರ ಮತ್ತಿತರ ಇಲಾಖೆ ಅನುಮತಿಯನ್ನು ತ್ವರಿತವಾಗಿ ಪಡೆದುಕೊಳ್ಳಬೇಕು ಸೂಚನೆ ನೀಡಿದರು.

ಯೋಜನೆ ಅನುಷ್ಠಾನ ಸುಗಮ ಮತ್ತು ತ್ವರಿತವಾಗಿ ಕೈಗೊಳ್ಳಲು ಅರಣ್ಯ, ನೀರಾವರಿ, ಕಂದಾಯ, ಪರಿಸರ ಇಲಾಖೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.

ಯೋಜನೆಗೆ ಸಂಬಂಧಿಸಿದಂತೆ ಪ್ರತಿ ವಾರ ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಹೇಳಿದರು.

ಜಲಾಶಯ ಯೋಜನೆಯ‌ ಸ್ಥೂಲ ಪರಿಚಯ

ಗೋಕಾಕ ಸುತ್ತಮುತ್ತಲಿನ ನೂರಕ್ಕೂ ಅಧಿಕ ಹಳ್ಳಿಗಳಿಗೆ ಕುಡಿಯುವ ನೀರಿನ ತೊಂದರೆ ಕಂಡುಬರುತ್ತಿದೆ. ಈ ಸಮಸ್ಯೆ ನಿವಾರಣೆಗೆ ಗೋಕಾಕ ಭಾಗದ ಮಾರ್ಕಂಡೇಯ ನದಿಗೆ ಗಟ್ಟಿ ಬಸವಣ್ಣ ಜಲಾಶಯ ನಿರ್ಮಾಣ ಮಾಡುವುದು ಸೂಕ್ತವಾಗಿದೆ.

ಮಾರ್ಕಂಡೇಯ ನದಿಗೆ ಜಲಾಶಯ ನಿರ್ಮಿಸಿ ಆರು ಟಿ‌‌ಎಂ.ಸಿ. ನೀರು ಸಂಗ್ರಹ ಸಾಧ್ಯವಾಗಲಿದೆ.
ಮಾರ್ಕಂಡೇಯನದಿಯ ವ್ಯಾಪ್ತಿಯಲ್ಲಿ ಜಲಾಶಯ ನಿರ್ಮಿಸುವ ಮೂಲಕ ಗೋಕಾಕ ಪಟ್ಟ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಬಹುದಾಗಿದೆ.

ಇದಲ್ಲದೇ ಅಣೆಕಟ್ಟಿನ ಎತ್ತರವನ್ನು ಬಳಸಿಕೊಂಡು 30ರಿಂದ 35 ಮೆಗಾವಾಟ್ ಜಲ ವಿದ್ಯುತ್ ಉತ್ಪಾದನೆಯ ಸಾಧ್ಯತೆಯನ್ನು ಪರಿಶೀಲಿಸಬಹುದು ಎಂದು ಯೋಜನೆಯ ಅಧ್ಯಯನ ಕೈಗೊಂಡಿರುವ ಕನ್ಸಲ್ಟನ್ಸಿ ಸಂಸ್ಥೆಯ ರಂಗನಾಥ ವಿವರಿಸಿದರು.

ಶಾಶ್ವತ ಕುಡಿಯುವ ನೀರು, ಜಲ ವಿದ್ಯುತ್ ಉತ್ಪಾದನೆ, ಅಂತರ್ಜಲ ಮಟ್ಟ ಹೆಚ್ಚಳ, ಅರಣ್ಯ ಪ್ರದೇಶ ಅಭಿವೃದ್ಧಿ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಗಟ್ಟಿ ಬಸವಣ್ಣ ಜಲಾಶಯ ಪೂರಕವಾಗಲಿದೆ ಎಂದು ತಿಳಿಸಿದರು.

ಕುಡಿಯುವ ನೀರಿನ ಯೋಜನೆಗೆ ಅರಣ್ಯ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಸಚಿವರು ಸೂಚಿಸಿದರು.

ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಜಲಾಶಯ ಯೋಜನೆಯ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.

ಶಾಸಕ ದುರ್ಯೋಧನ ಐಹೊಳೆ, ಬೆಳಗಾವಿ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎ‌.ಡಿ. ಕಣಗಿಲ್, ಪಾಲಿಕೆ ಆಯುಕ್ತ ಜಗದೀಶ್ ಕೆ‌.ಎಚ್., ಉಪ ವಿಭಾಗಾಧಿಕಾರಿ ಅಶೋಕ ತೇಲಿ ಅರಣ್ಯ, ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT