ಮಂಗಳವಾರ, ಏಪ್ರಿಲ್ 13, 2021
25 °C

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ, ಸ್ನಾತಕೋತ್ತರ ಹಾಗೂ ಎಂಇಎ ಕೋರ್ಸ್‌ಗಳ ಪರೀಕ್ಷೆಗಳನ್ನು ಏ.19ರಿಂದ ನಡೆಸಲಾಗುವುದು ಎಂದು ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ. ಹುರಕಡ್ಲಿ ತಿಳಿಸಿದ್ದಾರೆ.

‘ಪರೀಕ್ಷೆಗಳನ್ನು ಏ.7ರಿಂದ ನಿಗದಿಪಡಿಸಲಾಗಿತ್ತು. ಆದರೆ, ಸಾರಿಗೆ ನೌಕರರ ಮುಷ್ಕರ, ಕೆ–ಸೆಟ್ ಪರೀಕ್ಷೆ ಬಂದಿರುವುದು, ರಜಾ ದಿನಗಳು ಇರುವುದರಿಂದ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿರುವುದರಿಂದ ಮುಂದೂಡಲಾಗಿದೆ. ‍ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪಡೆಯಬಹುದಾಗಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು