ಬೆಳಗಾವಿ: ‘ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಸಂಬಂಧಿತ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆಶಾ ಕಾರ್ಯಕರ್ತೆಯರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

‘ವಿವಿಧ ಕೆಲಸಗಳ ನಿಮಿತ್ತ ಆಶಾ ಕಾರ್ಯಕರ್ತೆಯರು ನಿಯಮಿತವಾಗಿ ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಅವರಿಗೆ ವಿಶ್ರಾಂತಿ ಕೊಠಡಿಯ ವ್ಯವಸ್ಥೆ ಮಾಡಿಕೊಡಬೇಕು’ ಎಂದು ನಿರ್ದೇಶನ ನೀಡಿದರು.

ಜಿ.ಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಅಡವಿಮಠ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಐ.ಪಿ.ಗಡಾದ, ಚಿಕ್ಕೋಡಿ ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಗಡೇದ, ಇದ್ದರು.

‘ಆಶಾ ತಂತ್ರಾಂಶದಲ್ಲಿ ಕೆಲಸದ ಮಾಹಿತಿ ದಾಖಲಿಸಲು ಆಗುತ್ತಿಲ್ಲ. ಹಾಗಾಗಿ ತಂತ್ರಾಂಶದಲ್ಲಿನ ಸಮಸ್ಯೆ ಪರಿಹರಿಸಬೇಕು’ ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಶಿಂಧೆ ಅವರಿಗೆ ಮನವಿ ಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.