ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್ಡಬ್ಲ್ಯುಕೆಆರ್ಟಿಸಿ) ಗುರುತಿಸಿದ ಅಪಘಾತ ವಲಯಗಳ ಕುರಿತು, ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ರಸ್ತೆ ಹಾಳಾಗಿರುವುದು, ರಸ್ತೆ ಸುರಕ್ಷತಾ ಕ್ರಮ ಅನುಸರಿಸದಿರುವ ಹಿನ್ನೆಲೆಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

‘ಎನ್ಡಬ್ಲ್ಯುಕೆಆರ್ಟಿಸಿ ಗುರುತಿಸಿದ 49 ಅಪಘಾತ ವಲಯಗಳ ಪಟ್ಟಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಬೇಕು. ಈ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವಾಲಯಕ್ಕೆ ಪತ್ರ ಬರೆದು, ಅಪಘಾತಗಳನ್ನು ತಗ್ಗಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು’ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಎನ್ಡಬ್ಲ್ಯುಕೆಆರ್ಟಿಸಿ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ್ ಎಂ., ಮುಖ್ಯ ಎಂಜಿನಿಯರ್(ಸಂಪರ್ಕ ಮತ್ತು ಕಟ್ಟಡಗಳು) ಶಿವಾನಂದ ನಾಯ್ಕ, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಗಣೇಶ ರಾಥೋಡ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.