ಸಂಕೇಶ್ವರ: ಸಂಕೇಶ್ವರ –ನಿಡಸೋಸಿ ರಸ್ತೆಯ ಡಾಂಬರೀಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದವರು ಎತ್ತಿದ ಆಕ್ಷೇಪಣೆಯಿಂದ ಕಳೆದ ಎರಡು ತಿಂಗಳಿನಿಂದ ಕಾಮಗಾರಿ ನನೆಗುದಿಗೆ ಬಿದ್ದಿದೆ. ಈ ಕಾರಣ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.

ನಿಡಸೋಸಿ ರಸ್ತೆಯ ಬದಿಯಲ್ಲಿ ಮುಸ್ಲಿಂ ಸಮಾಜದವರು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿದ್ದು ರಸ್ತೆಯ ಈಗಿನ ಅಳತೆಯ ಡಾಂಬರೀಕರಣದಿಂದ ಅವುಗಳಿಗೆ ಧಕ್ಕೆಯಾಗುತ್ತದೆ ಎಂದು ರಸ್ತೆ ಡಾಂಬರೀಕರಣಕ್ಕೆ ತಡೆ ಒಡ್ಡಿದ್ದರು. ಇದಕ್ಕೆ ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಡಾಂಬರೀಕರಣಕ್ಕಾಗಿ ಈಗಾಗಲೇ ಹಿಂದೂಗಳ ಮನೆಗಳ ಕಾಂಪೌಂಡುಗಳನ್ನು ಒಡೆದು ಹಾಕಲಾಗಿದೆ. ಸಾರ್ವಜನಿಕ ಕೆಲಸ ಮಾಡುವಾಗ ಧರ್ಮಗಳು ಅಡ್ಡ ಬರಬಾರದು ಎಂದು ವಾದಿಸಿದ್ದವು.

ಚಿಕ್ಕೋಡಿ ಕಂದಾಯ ಇಲಾಖೆಯ ಸಹಾಯಕ ಆಯುಕ್ತರು (ಎ.ಸಿ.) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅದರ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿದ್ದರು. ಅದರನ್ವಯ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದರು.

ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಪ್ರವೀಣ ಮಾಡ್ಯಾಳ ಸಮಸ್ಯೆಯನ್ನು ವಿವರಿಸಿದರು. ಇನ್ನು 10 ದಿನಗಳೊಳಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಸಾರ್ವಜನಿಕ ವಿಷಯಗಳ ಬಗೆಗೆ ಧರ್ಮಗಳ ನಡುವೆ ಬಿರುಕು ಉಂಟಾಗಬಾರದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-21-2046276655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.