ಬೆಳಗಾವಿ: ‘ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಯೋಗ ಮತ್ತು ಆಯುಷ್ ಪದ್ಧತಿ ಬಲವರ್ಧನೆಗೊಳಿಸಲು ಉದ್ದೇಶಿಸಲಾಗಿದೆ. ಇದರ ಪ್ರಯುಕ್ತ ದೈಹಿಕ ಶಿಕ್ಷಣ ಶಿಕ್ಷಕರಿಗೆ ಯೋಗ ತರಬೇತಿ ನೀಡಿ, ಶಾಲಾ ಮಕ್ಕಳಿಗೆ ಕಲಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯುಷ್ ಇಲಾಖೆಯ ಜಿಲ್ಲೆಯ ಎಲ್ಲ ವೈದ್ಯಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯ ಶಾಲಾ ಮಕ್ಕಳ ಆರೋಗ್ಯ ಸುಧಾರಣೆ ನಿಟ್ಟಿನಲ್ಲಿ ಸರಳ ಯೋಗಾಸನಗಳು ಮತ್ತು ಆಯುಷ್ ಗಿಡ ಮೂಲಿಕೆಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡುವ ಮೂಲಕ ಬಲವರ್ಧನೆ ಗೊಳಿಸಬೇಕು’ ಎಂದೂ ಸೂಚಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ ಮಾತನಾಡಿ, 2025–26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಆಯುಷ್ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

‘ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವೈದ್ಯಾಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಕನಿಷ್ಠ 3 ವಸತಿ ಶಾಲೆಗಳ ವಸತಿ ನೀಲಯಗಳನ್ನು ದತ್ತು ಪಡೆದು ಅಲ್ಲಿರುವ ಮಕ್ಕಳಿಗೆ ನಿಯಮಿತ ಆರೋಗ್ಯ ತಪಾಸಣೆ, ಔಷಧ ವಿತರಣೆ ಮತ್ತು ಯೋಗಗಳ ಬಗ್ಗೆ ಮಾಹಿತಿ ನೀಡಿ ದತ್ತಾಂಶ ಸಂಗ್ರಹ ಮಾಡಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯಲ್ಲಿನ ಆಯುಷ್ ವೈದ್ಯರು ಆಯುಷ್ ಪದ್ಧತಿ ಮುಖ್ಯ ವಾಹಿನಿಗೆ ತರಲು ಜನರು ಮತ್ತು ಜನಪ್ರತಿನಿಧಿಗಳ ಜೊತೆಗೆ ಉತ್ತಮ ಸಂಬಂಧವಿರಿಸಿಕೊಂಡು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಈ ಔಷಧ ಪದ್ಧತಿ ತಲುಪಿಸಿ’ ಎಂದು ಸೂಚಿಸಿದರು.

‘ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಬರುವ ಆಯುಷ್ ಇಲಾಖೆಯ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಉತ್ತಮ ರೀತಿಯ ಐ.ಇ.ಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಹಾಗೂ ಪ್ರಸ್ತುತ ಲಭ್ಯವಿರುವ ಐ.ಇ.ಸಿ ಅನುದಾನವನ್ನು ಬಳಸಿಕೊಳ್ಳಲು’ ಸೂಚನೆ ನೀಡಿದರು.

ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ಆಸ್ಪತ್ರೆಗಳ ಮಾಹಿತಿಯನ್ನು ಪಡೆದುಕೊಂಡ ಸಿಇಒ, ‘ಇರುವ ವ್ಯವಸ್ಥೆಯಲ್ಲಿ ಪಂಚಕರ್ಮ ಮತ್ತು ಅಗ್ನಿಕರ್ಮಗಳಂತಹ ಚಿಕಿತ್ಸೆಗಳನ್ನು ನೀಡುತ್ತಿರುವ ಬಗ್ಗೆ ಮತ್ತು ರಾಜ್ಯದಲ್ಲಿ ಪ್ರಥಮವಾಗಿ ಜಿಲ್ಲಾ ಆಯುಷ್ ಆಸ್ಪತ್ರೆ ಬೆಳಗಾವಿಯಲ್ಲಿ ‘ಜೀವಕ’ ನೇತ್ರ ವಿಭಾಗದಲ್ಲಿ ಆಶಾಕಿರಣ – ದೃಷ್ಟಿ ಕೇಂದ್ರವನ್ನು ವಿಸ್ತರಿಸಿದ್ದು ಒಳ್ಳೆಯ ಬೆಳವಣಿಗೆ’ ಎಂದರು.

ಜಿಲ್ಲೆಯ ಯಾವುದೇ ಚಿಕಿತ್ಸಾಲಯ ಮತ್ತು ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧ ಕೊರತೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ರಾಜ್ಯ ಆಯುಷ್ ಇಲಾಖೆ ಸಮನ್ವಯ ಅಧಿಕಾರಿ ಡಾ.ಚಂದ್ರಶೇಖರ ಸಿದ್ದಾಪೂರ, ಆಯುಷ್ ಇಲಾಖೆಯ ಎಲ್ಲ ಆಯುಷ್ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-21-894853111

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.