ಬೆಳಗಾವಿ: ‘ಇಲ್ಲಿ ಡಿ.9ರಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಅಚ್ಚುಕಟ್ಟಾಗಿ ನಡೆಸುವ ಸಲುವಾಗಿ ಎಲ್ಲ ಸಿದ್ಥತೆ ಮಾಡಿಕೊಳ್ಳಲಾಗುತ್ತಿದೆ. ವಸತಿ, ಸಾರಿಗೆ, ಊಟ–ಉಪಾಹಾರ ಸೇರಿದಂತೆ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.

ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಊಟ, ಉಪಾಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡಬೇಕು. ಉತ್ತಮ ವ್ಯವಸ್ಥೆ ಖಚಿತಪಡಿಸಬೇಕು. ಅಲ್ಲದೆ, ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ವೈದ್ಯಕೀಯ ತಂಡಗಳು ಮತ್ತು ಆಂಬುಲೆನ್ಸ್ಗಳನ್ನು ನಿಯೋಜಿಸಬೇಕು’ ಎಂದು ತಿಳಿಸಿದರು.

‘ಸುವರ್ಣ ವಿಧಾನಸೌಧದ ಒಳಗಡೆಯ ಕಾರಿಡಾರ್ಗಳು ಹಾಗೂ ಮೊಗಸಾಲೆಯಲ್ಲೂ ಪಾವತಿ ಆಧಾರದಲ್ಲಿ ವಿವಿಧ ಬಗೆಯ ಉಪಾಹಾರ, ಚಹಾ ವ್ಯವಸ್ಥೆ ಕಲ್ಪಿಸಬೇಕು’ ಎಂದೂ ನಿರ್ದೇಶನ ನೀಡಿದರು.

‘ಪ್ರತಿಭಟನಾ ಸ್ಥಳಗಳ ನಿರ್ವಹಣೆ, ಸೂಕ್ತ ಭದ್ರತೆಗೆ ಅಗತ್ಯ ಕ್ರಮ ವಹಿಸಬೇಕು. ನಗರದೊಳಗಿನ ರಸ್ತೆಗಳು ಹಾಗೂ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾಮಗಾರಿ ತ್ವರಿತವಾಗಿ ಕೈಗೆತ್ತಿಕೊಂಡು, ಬೇಗ ಪೂರ್ಣಗೊಳಿಸಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ‘ಈ ಬಾರಿ ಸುಗಮವಾಗಿ ಅಧಿವೇಶನ ನಡೆಸಲು 10 ಸಮಿತಿಗಳನ್ನು ರಚಿಸಲಾಗಿದೆ. ಕಳೆದ ಬಾರಿಯಂತೆ ವಿವಿಧ ಸ್ಥಳಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಹೇಳಿದರು.

ನಗರ ಪೊಲೀಸ್ ಉಪ ಆಯುಕ್ತ ರೋಹನ್ ಜಗದೀಶ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭಾ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ, ಲೊಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್.ಸೊಬರದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.