ಬೆಳಗಾವಿ: ಸಾವಿರಾರು ಕೋಟಿ ರೂಪಾಯಿ ಅನಧಿಕೃತ ಬಡ್ಡಿ ವ್ಯವಹಾರ ಮಾಡಿದ ಆರೋಪ ಎದುರಿಸುತ್ತಿರುವ ಇಲ್ಲಿನ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲ್ಲೂಕಿನ ಐನಾಪುರ ಗ್ರಾಮದ ಕೃಷ್ಣ ಅಪ್ಪಣ್ಣ ಅಪ್ರಾಜ್ ದೂರು ದಾಖಲಿಸಿದ್ದಾರೆ.

‘ಶೇ 36ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ನನ್ನಿಂದ ಇದೇ ಏಪ್ರಿಲ್ 4 ರಿಂದ ಮೇ 8ರವರೆಗೆ ₹ 5 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಹಣ ಹೂಡಿಕೆ ಮಾಡಿದ ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ಹೇಳಿಕೆ ನೀಡಿದಾಗಲೇ ವಿಷಯ ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸಿಐಡಿ ಅಧಿಕಾರಿಗಳು ಮಂಗಳವಾರ ಶಿವಾನಂದ ಅವರನ್ನು ಬೆಂಗಳೂರಿಗೆ ಕರೆದೊಯ್ದರು ಎಂದು ಮೂಲಗಳು ಖಚಿತಪಡಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-177721484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.