ಬೆಳಗಾವಿ: ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ದೇವಸ್ಥಾನದ ಪೂಜೆ ವಿಚಾರಕ್ಕೆ ಸಂಬಂಧಿಸಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ನರಸೋಬಾ ಕರೆಪ್ಪ ಸಾಂಬ್ರೇಕರ್ ಕುಟುಂಬದೊಂದಿಗೆ ಯಾರೂ ಮಾತನಾಡಬಾರದು ಎಂದು ಪಂಚರು ಸೂಚನೆ ನೀಡಿದ್ದಾರೆ ಎಂದು ನರಸೋಬಾ ಅವರು ಹಲವು ದಿನಗಳ ಹಿಂದೆಯೇ ದೂರು ಸಲ್ಲಿಸಿದರೂ, ದೂರು ದಾಖಲಾಗಿರಲಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಗ್ರಾಮದ ಮುಖಂಡರು, ‘ಬಹಿಷ್ಕಾರ ಮಾಡಿಲ್ಲ. ದೇವಸ್ಥಾನದ ಬಗ್ಗೆ ನಂಬಿಕೆ ಇಲ್ಲದ ಕಾರಣ ಮಾತು ಬಿಟ್ಟಿದ್ದೇವೆ’ ಎಂದು ಸಮಜಾಯಿಷಿ ನೀಡಿದ್ದರು. ಆದರೆ, ಬಹಿಷ್ಕಾರ ಹಾಕಿದ್ದಾರೆ ಎಂದು ನಸರಸೋಬಾ ಎಫ್ಐಆರ್ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-21-2135173602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.