ಬೆಳಗಾವಿ: ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗುಬ್ಬಚ್ಚಿ ಸಂರಕ್ಷಣಾ ತಂಡ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಗರದ ನ್ಯಾಯಾಂಗ ನಿವಾಸದ ಆವರಣದಲ್ಲಿ ಶುಕ್ರವಾರ ಗುಬ್ಬಚ್ಚಿ ಗೂಡು ಹಾಗೂ ಪಕ್ಷಿಗಳಿಗೆ ನೀರಿನ ಪಾತ್ರೆಗಳ ಅಳವಡಿಕೆ– ವಿತರಣೆ ಕಾರ್ಯಕ್ರಮ ನಡೆಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ್ ನಾಯ್ಕ್, ನ್ಯಾ.ಸಂದೀಪ ಪಾಟೀಲ ಹಾಗೂ ಎಲ್ಲ ನ್ಯಾಯಾಧೀಶರ ಸಮ್ಮುಖದಲ್ಲಿ ಪ್ರಕೃತಿ ಮತ್ತು ಗುಬ್ಬಚ್ಚಿಗಳ ಸಂರಕ್ಷಣೆಗೆ ಸಮರ್ಪಿತವಾದ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ನೆರವೇರಿತು.

ಯಲ್ಲಾಪೂರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ ಪ್ರಭಾಕರ ಅವರು, ಪರಿಸರ ಸಂರಕ್ಷಣೆಯಲ್ಲಿ ಗುಬ್ಬಚ್ಚಿಗಳ ಪಾತ್ರ ಕುರಿತು ಉಪನ್ಯಾಸ ನೀಡಿದರು.

‘ಪರಿಸರ ವ್ಯವಸ್ಥೆಯಲ್ಲಿ ಗುಬ್ಬಚ್ಚಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೀಟಗಳ ನಿಯಂತ್ರಣ ಗುಬ್ಬಚ್ಚಿಗಳು ಕೃಷಿ ಮತ್ತು ತೋಟಗಾರಿಕೆಗೆ ಹಾನಿ ಮಾಡುವ ಸಣ್ಣ ಕೀಟಗಳು, ಮರಿಹುಳುಗಳು , ಮತ್ತು ವಿವಿಧ ಹುಳುಗಳನ್ನು ತಿನ್ನುತ್ತವೆ. ವಿಶೇಷವಾಗಿ ತಮ್ಮ ಮರಿಗಳಿಗೆ ಆಹಾರ ನೀಡುವಾಗ, ಇವು ಹಾನಿಕಾರಕ ಕೀಟಗಳನ್ನು ಹೆಚ್ಚಾಗಿ ಬೇಟೆಯಾಡುವುದರಿಂದ ರೈತರಿಗೆ ಸಹಕಾರಿಯಾಗಿವೆ. ಪಕ್ಷಿಗಳಲ್ಲ, ಬದಲಾಗಿ ಪರಿಸರದ ಆರೋಗ್ಯದ ಸಂಕೇತಗಳಾಗಿವೆ. ಗುಬ್ಬಚ್ಚಿಗಳು ವಿವಿಧ ಸಸ್ಯಗಳ ಬೀಜಗಳನ್ನು ತಿಂದು, ನಂತರ ಅವುಗಳನ್ನು ಬೇರೆಡೆಗೆ ಸಾಗಿಸುವ ಮೂಲಕ ಸಸ್ಯಗಳ ಸಂತಾನೋತ್ಪತ್ತಿಗೆ ಸಹಾಯ ಮಾಡುತ್ತವೆ. ಇದು ಪರಿಸರದಲ್ಲಿ ಜೈವಿಕ ವೈವಿಧ್ಯತೆಯನ್ನು ಹೆಚ್ಚಿಸುತ್ತದೆ. ಆದ ಕಾರಣ ಗುಬ್ಬಚ್ಚಿಗಳ ಸಂರಕ್ಷಣೆ ಅವಶ್ಯ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-21-1807980970

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.