ಮಂಗಳವಾರ, ಅಕ್ಟೋಬರ್ 27, 2020
25 °C

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು.

‘ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ 723 ವಿದ್ಯಾರ್ಥಿಗಳು  ಗೈರು ಹಾಜರಾದರು. ಯಾರೂ ಡಿಬಾರ್‌ ಆಗಿಲ್ಲ’ ಎಂದು ಡಿಡಿಪಿಐಗಳಾದ ಎ.ಬಿ. ಪುಂಡಲೀಕ ಮತ್ತು ಗಜಾನನ ಮನ್ನಿಕೇರಿ ತಿಳಿಸಿದರು.

‘ಚಿಕ್ಕೋಡಿ ಜಿಲ್ಲೆಯಲ್ಲಿ 9,413 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 8,959 ಮಂದಿ ಹಾಜರಾದರು. ಬೆಳಗಾವಿ ಜಿಲ್ಲೆಯಲ್ಲಿ ನೋಂದಾಯಿಸಿದ್ದ 7,566 ವಿದ್ಯಾರ್ಥಿಗಳಲ್ಲಿ 269 ಮಂದಿ ಗೈರು ಹಾಜರಾದರು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು