ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಶಾಸಕ ಆಸಿಫ್ ಸೇಠ್ ಅವರು ಅಧಿಕಾರಿಗಳ ವಿರುದ್ಧವಾಗ್ದಾಳಿ ನಡೆಸಿದರು
‘ನಿರ್ಣಯಗಳು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ’
‘ಮಹಾನಗರ ಪಾಲಿಕೆಯ ಸಭೆಗಳಲ್ಲಿ ಕೈಗೊಂಡ ಯಾವುದೇ ನಿರ್ಣಯ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ’ ಎಂದು ವಿರೋಧ ಪಕ್ಷದ ಸದಸ್ಯರಾದ ಅಜೀಮ್ ಪಟವೇಗಾರ ಶಾಹೀದ್‌ಖಾನ್ ಪಠಾಣ ದೂರಿದರು. ‘ನಾವು ಕೇಳಿದ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ಸ್ಪಷ್ಟವಾಗಿ ನೀಡುತ್ತಿಲ್ಲ. ಸಭೆ ಬಗ್ಗೆ ಮುಂಚಿತವಾಗಿಯೇ ತಿಳಿಸುತ್ತಿಲ್ಲ. ನೆಪಗಳನ್ನೊಡ್ಡಿ ಜಾರಿಕೊಳ್ಳುತ್ತಿದ್ದಾರೆ’ ಎಂದು ಆಪಾದಿಸಿದರು. ಈ ಬಗ್ಗೆ ಅಧಿಕಾರಿಗಳು ಸಮಜಾಯಿಷಿ ನೀಡಿದರೂ ಸುಮ್ಮನಾಗದ ಸದಸ್ಯರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.