ಬೆಳಗಾವಿ: ಇಲ್ಲಿನ ಆಝಮ್ ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕೊಠಡಿಯಲ್ಲಿ ಸೋಮವಾರ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿ.ಎಸ್ಸಿ ಅಂತಿಮ ವರ್ಷ ಓದುತ್ತಿದ್ದ ಹುಕ್ಕೇರಿ ತಾಲ್ಲೂಕಿನ ಕಟಾಬಳ್ಳಿಯ ಕಾವೇರಿ ಉಮೇಶ ನಾಯಕ(21) ಮೃತರು.

‘ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್ಟೆಬಲ್ ಜತೆಗೆ ವಿವಾಹ ನಿಶ್ಚಯವಾಗಿತ್ತು. ಸೋಮವಾರ ತಮ್ಮ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಉಸ್ಮಾನ್ ಆವಟಿ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.