ಬೆಳಗಾವಿ: ಇಲ್ಲಿನ ಸದಾಶಿವ ನಗರದ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಕಾಕ ತಾಲ್ಲೂಕಿನ ಘಟಪ್ರಭಾದ ಸುಮಿತ್ರಾ ಗೋಕಾಕ(19) ಮೃತರು.

‘₹25 ಸಾವಿರ ಸಾಲ ಮಾಡಿ ಮಗಳನ್ನು ನರ್ಸಿಂಗ್ ಕೋರ್ಸ್ಗೆ ಸೇರಿಸಿದ್ದೆ. ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ತಂದೆ ದುಂಡಪ್ಪ ಗೋಳಾಡಿದರು.

ಸಮಾಜಕಲ್ಯಾಣ ಇಲಾಖೆ ಜಂಟಿನಿರ್ದೇಶಕ ರಾಮನಗೌಡ ಕನ್ನೊಳ್ಳಿ, ‘ಒಂದು ತಿಂಗಳ ಹಿಂದಷ್ಟೇ ವಿದ್ಯಾರ್ಥಿನಿ ಈ ಹಾಸ್ಟೆಲ್ನಲ್ಲಿ ಪ್ರವೇಶ ಪಡೆದಿದ್ದರು. ಸೋಮವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ’ ಎಂದರು.

ಎಪಿಎಂಸಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.