ಬೆಳಗಾವಿ: ಇಲ್ಲಿನ ಬೆಳಗಾಂ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಗೆ 2024-25ನೇ ಸಾಲಿನ ಉತ್ತರ ಕರ್ನಾಟಕ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ ಪ್ರಶಸ್ತಿಯನ್ನು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ನೀಡಿ ಗೌರವಿಸಿತು.

ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಶನಿವಾರ ನಡೆದ 19ನೇ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು, ಕಾರ್ಖಾನೆ ಚೇರ್ಮನ್ ಪ್ರದೀಪಕುಮಾರ ಇಂಡಿ, ಹಿರಿಯ ಉಪಾಧ್ಯಕ್ಷ ಎಲ್.ಆರ್.ಕಾರಗಿ ಮತ್ತು ತಾಂತ್ರಿಕ ವಿಭಾಗದ ಉಪಾಧ್ಯಕ್ಷ ಎ.ಎಸ್.ರಾಣಾ ಅವರಿಗೆ ಪ್ರಶಸ್ತಿ ನೀಡಿದರು.

ಸಕ್ಕರೆ ಉದ್ಯಮ ಮತ್ತು ಕಬ್ಬು ಬೆಳೆ ಕುರಿತು ವಿಶೇಷ ಅಧ್ಯಯನ, ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದ ಪದವಿ ಕೋರ್ಸ್ಗಳು, ತಾಂತ್ರಿಕ ಅಭಿವೃದ್ಧಿ ಹಾಗೂ ವಿವಿಧ ವಿಷಯಗಳ ಮಾಹಿತಿ ಶಿಬಿರಗಳನ್ನು ಏರ್ಪಡಿಸುವ ಮೂಲಕ ಸಕ್ಕರೆ ಉದ್ಯಮಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಸಂಸ್ಥಾಪಕ ಅಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಕಾರ್ಖಾನೆ ಪ್ರಗತಿಯತ್ತ ಸಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-21-1328171087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.