ಬೆಳಗಾವಿ: ‘ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ ತಕ್ಷಣವೇ ಪಾವತಿಸಬೇಕು’ ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ರೈತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

‘ಯಾವುದೇ ಕಾರ್ಖಾನೆಯವರು ಕಬ್ಬು ಪೂರೈಕೆಯಾದ 15 ದಿನಗಳ ಒಳಗೆ ಬಿಲ್ ಪಾವತಿಸಬೇಕು ಎಂಬ ನಿಯಮವಿದೆ. ಆದರೆ, ಅನೇಕ ಕಾರ್ಖಾನೆಗಳು ಇದನ್ನು ಪಾಲಿಸುತ್ತಿಲ್ಲ. ಹೀಗಿದ್ದರೂ ಸರ್ಕಾರ ಕಾರ್ಖಾನೆಗಳ ಮೇಲೆ ಕ್ರಮ ಜರುಗಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರದ ಆದೇಶದಂತೆ ಎಲ್ಲ ಕಾರ್ಖಾನೆಗಳು ರೈತರಿಗೆ ನಿಗದಿತ ದರ ನೀಡಬೇಕು. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆ ಅಧ್ಯಕ್ಷ ಮಹಾಂತೇಶ ಕಮತ, ‘ಬಾಕಿ ಉಳಿಸಿಕೊಂಡ ₹3,500 ಕೋಟಿ ಕಬ್ಬಿನ ಬಿಲ್ ಅನ್ನು ಕಾರ್ಖಾನೆಗಳು ಬೇಗ ಪಾವತಿಸದಿದ್ದರೆ, ಜಿಲ್ಲಾಧಿಕಾರಿ ಕಚೇರಿ ಮತ್ತು ಸಕ್ಕರೆ ಆಯುಕ್ತರ ಕಚೇರಿ ಮುತ್ತಿಗೆ ಹಾಕಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ರೈತರು ಮನವಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-21-821030333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.