ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಜತೆ ಸಹಕರಿಸಬೇಕು’ ಎಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮನವಿ ಮಾಡಿದರು.

ಇಲ್ಲಿನ ಪ್ರವಾಸಿಮಂದಿರದಲ್ಲಿ ಭಾನುವಾರ ನಡೆದ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ತಬ್ಲಿಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರು ಹಾಗೂ ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಸೋಂಕು ಕಂಡುಬಂದಿರುವುದರಿಂದ ಅವರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿದೆ. ಕ್ವಾರಂಟೈನ್‌ನಲ್ಲಿ ಇದ್ದವರು ನಿಗದಿತ ಅವಧಿ ಪೂರ್ಣಗೊಳ್ಳುವವರಿಗೆ ಅಂತರ ಕಾಯ್ದುಕೊಳ್ಳಬೇಕು. ವೈದ್ಯರು ಮತ್ತು ಸಿಬ್ಬಂದಿ ಜತೆ ಸಹಕರಿಸುವಂತೆ ತಿಳಿವಳಿಕೆ ನೀಡಬೇಕು’ ಎಂದು ಕೋರಿದರು.

ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಿ:‘ಪವಿತ್ರ ರಂಜಾನ್ ಮಾಸದ ಹಿನ್ನೆಲೆಯಲ್ಲಿ ಸಮಾಜದವರು ತಮ್ಮ ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಎಲ್ಲರಿಗೂ ಮನವರಿಕೆ ಮಾಡಬೇಕು. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಸ್ವಯಂಪ್ರೇರಿತವಾಗಿ ಜಿಲ್ಲಾಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾಗಬೇಕು. ಇದರಿಂದ ವ್ಯಕ್ತಿಯು ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ, ಸಮಾಜದವರ ಹಿತವನ್ನೂ ಕಾದಂತಾಗುತ್ತದೆ. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ತಿಳಿಸಿದರು.

‘ಸರ್ಕಾರದ ನಿರ್ದೇಶನದಂತೆ ಪೊಲೀಸರು ಲಾಕ್‌ಡೌನ್ ಸಂದರ್ಭದಲ್ಲಿ ಸಂಚಾರ ನಿರ್ಬಂಧಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಪೊಲೀಸರ ಜತೆ ಎಲ್ಲರೂ ಸಹಕರಿಸಬೇಕು. ನಿಷೇಧಿತ ಪ್ರದೇಶ (ಕಂಟೈನ್ಮೆಂಟ್ ಝೋನ್) ಎಂದು ಘೋಷಿಸಿರುವ ಕಡೆಗಳಲ್ಲಿ ದಿನಸಿ, ತರಕಾರಿ ಮತ್ತು ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಮುಂದಿನ ಆದೇಶದವರೆಗೂ ಅನವಶ್ಯವಾಗಿ ಹೊರಗೆ ಬರಬಾರದು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು.

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಸಹಕಾರ ನೀಡುವಂತೆ ಮನವರಿಕೆ ಮಾಡಲಾಗುವುದು ಎಂದು ಮುಖಂಡರು ಭರವಸೆ ನೀಡಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.