ಸಂಕೇಶ್ವರ: ಗ್ರಾಮೀಣ ಜನತೆ ಹಾಗೂ ಆಡಳಿತದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅವರ ಸಮಸ್ಯೆಗಳು ಮತ್ತು ಸೇವಾ ಹಿತಾಸಕ್ತಿಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ. ಎಂ. ಹೇಳಿದರು.

ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಬೆಳಗಾವಿ ಜಿಲ್ಲಾ ಘಟಕ ಹಾಗೂ ಹುಕ್ಕೇರಿ ತಾಲ್ಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅವರ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದು ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯ್ಕ ಮಾತನಾಡಿ, ಸರ್ಕಾರಿ ನೌಕರರು ತಮ್ಮ ಹಕ್ಕುಗಳು ಹಾಗೂ ಸೇವಾ ಸೌಲಭ್ಯಗಳಿಗಾಗಿ ಸಂಘಟಿತ ಹೋರಾಟ ನಡೆಸುವುದು ಅಗತ್ಯವಾಗಿದೆ. ಸಂಘಟನೆಯ ಬಲದಿಂದಲೇ ನೌಕರರ ಬೇಡಿಕೆಗಳಿಗೆ ಸಮರ್ಪಕ ನ್ಯಾಯ ದೊರೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹುಕ್ಕೇರಿ ವಿರಕ್ತಮಠದ ಶಿವಬಸವ ಸ್ವಾಮೀಜಿ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನಾಶೀಲತೆಯಿಂದ ಕಾರ್ಯನಿರ್ವಹಿಸಿ ಸಮಾಜಮುಖಿ ಆಡಳಿತ ನೀಡಬೇಕು ಎಂದು ಸಲಹೆ ನೀಡಿದರು.

ಸಂಘದ ಜಿಲ್ಲಾ ಅಧ್ಯಕ್ಷ ಎನ್. ಆರ್. ಪಾಟೀಲ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಕಾಲಿಕ ಪದೋನ್ನತಿ, ಹೆಚ್ಚುವರಿ ಭತ್ಯೆ, ಚುನಾವಣೆ ಸಂದರ್ಭಗಳಲ್ಲಿ ವಿಶೇಷ ವೇತನ, ಮೂಲಸೌಕರ್ಯಯುತ ಕಚೇರಿ ವ್ಯವಸ್ಥೆ ಹಾಗೂ ಭೂಮಿ ಕೇಂದ್ರಗಳಿಗೆ ಅಗತ್ಯ ಸಿಬ್ಬಂದಿ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸಂಘದ ವತಿಯಿಂದ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದ ಮನವಿಪತ್ರವನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಯಿತು. ಸಂಘದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟ-2026ರಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಸನ್ಮಾನಿಸಿ, ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಸಂಘದ ಗೌರವಾಧ್ಯಕ್ಷ ಕಿರಣ ತೊರಗಲ್ಲ, ಉಪಾಧ್ಯಕ್ಷ ಸಂತೋಷ ಪಾಶ್ಚಾಪೂರಿ, ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಖಜಾಂಚಿ ಮಲ್ಲಿಕಾರ್ಜುನ ಕರಡಿಗುಡ್ಡ, ತಾಲ್ಲೂಕು ಅಧ್ಯಕ್ಷ ಉಮೇಶ ನಾಗರಾಳಿ ಇದ್ದರು. ಗ್ರಾಮ ಆಡಳಿತಾಧಿಕಾರಿ ಫಕಿರೇಶ ಎಸ್. ಸ್ವಾಗತಿಸಿದರು. ವಿಠ್ಠಲ ಬುಕನಟ್ಟಿ ನಿರೂಪಿಸಿದರು. ಮುಕ್ತಾ ಕಾಂಬೋಜಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-21-187988862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.