ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಶನಿವಾರ ರಾಜ್ಯೋತ್ಸವ ಮೆರವಣಿಗೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ಐವರಿಗೆ ಚಾಕು– ಜಂಬೆಗಳಿಂದ ಇರಿದು ಪರಾರಿಯಾಗಿದೆ. ಗಾಯಗೊಂಡ ಐವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡುತ್ತ, ಯುವಕರ ಗುಂಪು ನೃತ್ಯ ಮಾಡುತ್ತಿತ್ತು. ಏಕಾಏಕಿ ಗುಂಪಿಗೆ ನುಗ್ಗಿದ ಕೆಲವರು ಜನಸಂದಣಿಯಲ್ಲೇ ಚಾಕು ಹಾಗೂ ಜಂಬೆಗಳಿಂದ ಚುಚ್ಚಿದರು. ಯುವಕರು ನೆಲಕ್ಕೆ ಬಿದ್ದು ರಕ್ತಸ್ರಾವದಿಂದ ಒದ್ದಾಡುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾದರು.

ಗಾಯಗೊಂಡವರನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಹಾಗೂ ನಜೀರ್ ಪಠಾಣ್ ಎಂದು ಗುರುತಿಸಲಾಗಿದೆ. ತಲೆ, ಹೊಟ್ಟೆ, ಬೆನ್ನು, ಗುದದ್ವಾರ ಹೀಗೆ ದೇಹದ ವಿವಿಧ ಭಾಗಗಳಿಗೆ ಚಾಕು ಏಟು ಬಿದ್ದಿವೆ.

ಸ್ಥಳಕ್ಕೆ ಧಾವಿಸಿದ ಎಪಿಎಂಸಿ ಠಾಣೆ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.