ಬೆಳಗಾವಿ: ‘ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ದೋಷರಹಿವಾಗಿ ನಡೆಸಬೇಕು. ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾಕಷ್ಟು ಬಾರಿ ಚುನಾವಣಾ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಉದಾಹರಣೆಗಳಿವೆ. ಆದ್ದರಿಂದ ಪ್ರತಿಯೊಬ್ಬರು ಜಾಗೃತೆಯಿಂದ ಕಾರ್ಯ ಚುನಾವಣಾ ಕರ್ತವ್ಯ ನಿರ್ವಹಿಸಬೇಕು’ ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ ಎಚ್ಚರಿಕೆ ನೀಡಿದರು.

ಇಲ್ಲಿನ ಸುವರ್ಣ ವಿಧಾನ ಸೌಧದಲ್ಲಿ ಮಂಗಳವಾರ ಮತದಾರರ ಪಟ್ಟಿ ತೀವ್ರ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ, ಚುನಾವಣಾ ತಹಶೀಲದಾರ ಹಾಗೂ ಟೆಕ್ನಕಲ್ ಪ್ರೋಗ್ರಾಮರ್ಗಳ ವಿಭಾಗ ಮಟ್ಟದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಹಾಗೂ ಅನರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಕುರಿತು ಕ್ರಮ ವಹಿಸಬೇಕು. ಗೈರು, ವಲಸೆ ಮತದಾರರ ಕುರಿತು ಪರಿಶೀಲಿಸಿ ಕ್ರಮ ವಹಿಸಬೇಕು’ ಎಂದೂ ತಿಳಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ‘ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳಲ್ಲಿ ಈಗಾಗಲೇ ಬಹು ನೋಂದಣಿಗಳನ್ನು ಮ್ಯಾಪಿಂಗ್ ಮಾಡಲಾಗಿದೆ. ಇನ್ನೂ ಸಾಕಷ್ಟು ಜನ ಮ್ಯಾಪಿಂಗ್ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡಿಲ್ಲ. ಹಾಗಾಗಿ ಬಾಕಿ ಮ್ಯಾಪಿಂಗ್ ಮತ್ತು ಮತದಾರ ಪಟ್ಟಿಯಲ್ಲಿ ಕೈಬಿಟ್ಟು ಹೋದ ವ್ಯಕ್ತಿಗಳನ್ನು ಕೂಡಲೇ ಸಮೀಕ್ಷೆ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಬೇಕು’ ಎಂದು ಸೂಚಿಸಿದರು.

‘ಮತದಾನವು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವ ಹಕ್ಕಾಗಿದ್ದು, ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಹಾಗೂ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಕಡ್ಡಾಯವಾಗಿ ಚಾಚೂ ತಪ್ಪದೇ ಪಾಲಿಸಬೇಕು’ ಎಂದರು.

ಕಾರ್ಯಾಗಾರದಲ್ಲಿ ಬೆಳಗಾವಿ ವಿಭಾಗದ ಎಲ್ಲ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು, ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ, ಚುನಾವಣಾ ತಹಶೀಲ್ದಾರ್ ಹಾಗೂ ಟೆಕ್ನಕಲ್ ಪ್ರೋಗ್ರಾಮರ್ಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-777932887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.