ಬೆಳಗಾವಿ: ಜೈನ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ ಸಂಸ್ಥೆ ವತಿಯಿಂದ ಏ.9ರಂದು ವಿಶ್ವ ನವಕಾರ ದಿನಾಚರಣೆ ಮಾಡಲು ನಿರ್ಧರಿಸಲಾಗಿದೆ.

ವಿಶ್ವದಾದ್ಯಂತ ಈ ಕಾರ್ಯಕ್ರಮ ನಡೆಯಲಿದೆ. ಕಳೆದ ವರ್ಷವೂ ವಿಶ್ವ ನವಕಾರ ದಿವಸ ಆಚರಣೆ ಮಾಡಲಾಗಿತ್ತು. ಅಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಇದೀಗ ಆಯೋಜಿಸಲಾದ ಈ ಕಾರ್ಯಕ್ರಮ ಜಿತೋ ಸಂಸ್ಥೆಯ ದ್ವೀತಿಯ ಆವೃತ್ತಿ ಆಗಿದ್ದು, ಏ.9ರಂದು ನವದೆಹಲಿಯಲ್ಲಿ ನಡೆಯಲಿರುವ ಮುಖ್ಯ ಸಮಾರಂಭಕ್ಕೆ ಗೃಹಮಂತ್ರಿ ಅಮಿತ್ ಶಾ ಆಗಮಿಸಲಿದ್ದಾರೆ. ಇದರ ಅಂಗವಾಗಿ ಬೆಳಗಾವಿ ಜಿತೋ ಸಂಸ್ಥೆಯು ಸಹ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ಅಂದು ಬೆಳಿಗ್ಗೆ 7 ಗಂಟೆಗೆ ನಗರದ ಮಿಲೆನಿಯಂ ಗಾರ್ಡನ್ನಲ್ಲಿ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಅದರಂತೆ ಜಿಲ್ಲೆಯಲ್ಲಿ ಸುಮಾರು 260 ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಸಮಸ್ತ ಜೈನ ಸಮಾಜದ ವತಿಯಿಂದ ಆಯೋಜಿಸಲಾಗಿದೆ. ಣಮೋಕಾರ ಮಂತ್ರ ಪಠಣ ನಡೆಯಲಿದ್ದು, ಎಲ್ಲ ಸಮಾಜ ಬಾಂಧವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಜಿತೋ ಅಧ್ಯಕ್ಷ ಹರ್ಷವರ್ಧನ ಇಂಚಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-21-1842899641

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.