ಭಾನುವಾರ, ಜುಲೈ 3, 2022
24 °C

ಹಾಲು ಖರೀದಿ ದರ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯಲ್ಲಿ ಹಾಲು ಖರೀದಿ ದರವನ್ನು ಸೋಮವಾರದಿಂದ (ಮಾರ್ಚ್‌ 16) ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ’ ಎಂದು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪನ ನಿರ್ದೇಶಕ ಉಬೇದುಲ್ಲಾ ಖಾನ್‌ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಅನಾವೃಷ್ಟಿ ಹಾಗೂ ಅತಿವೃಷ್ಟಿಯಿಂದಾಗಿ ಮೇವಿನ ಲಭ್ಯತೆಯಲ್ಲಿ ಕೊರತೆ ಉಂಟಾಗಿರುವುದರಿಂದಾಗಿ ಹಾಲು ಉತ್ಪಾದಕರು ಸಿದ್ಧ ಪಶುಆಹಾರ, ಲವಣ ಮಿಶ್ರಣ ಹಾಗೂ ಇತರ ‍ಪದಾರ್ಥಗಳನ್ನು ಬಳಸುವ ಅನಿವಾರ್ಯತೆ ಉಂಟಾಗಿದೆ. ಇದರಿಂದ ಹಾಲು ಉತ್ಪದನಾ ವೆಚ್ಚ ಹೆಚ್ಚಳವಾಗುತ್ತಿದೆ. ಹೀಗಾಗಿ, ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಿ ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ದರ ಹೆಚ್ಚಿಸಲು ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧಾರಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಹಾಲಿನ ಖರೀದಿ ದರ ಪ್ರತಿ ಕೆ.ಜಿ.ಗೆ ₹ 1.50 ಹಾಗೂ ಎಮ್ಮೆ ಹಾಲು ಖರೀದಿ ದರವನ್ನು 50 ಪೈಸೆ ಹೆಚ್ಚಿಸಲು ನಿರ್ಣಯಿಸಲಾಗಿದೆ. ಉತ್ಪಾದಕರಿಗೆ ಪ್ರಸ್ತುತ ಆಕಳು ಹಾಲಿನ ದರ (3.5 ಫ್ಯಾಟ್/ 8.5 ಎಸ್‌ಎನ್‌ಎಫ್) ಲೀಟರ್‌ಗೆ ₹ 26.50 ಇದ್ದು, ಇದನ್ನು ₹ 28ಕ್ಕೆ ಹಾಗೂ ಎಮ್ಮೆ ಹಾಲಿನ ದರವನ್ನು (6.0 ಫ್ಯಾಟ್/ 9.0 ಎಸ್‌ಎನ್‌ಎಫ್‌) ₹ 36.75ರಿಂದ ₹ 37.25ಕ್ಕೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು