ಬೆಳಗಾವಿ: ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಹಾಗೂ ಕನ್ನಡ ವಿರೋಧಿಗಳನ್ನು ಸನ್ಮಾನಿಸಿದ ಆರೋಪದ ಮೇಲೆ ಎಂಇಎಸ್ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು.

ಈಚೆಗೆ ಬೆಳಗಾವಿ ಬಳಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶುಭಂ ತನ್ನ ಫೇಸ್ಬುಕ್ ಖಾತೆಯಲ್ಲಿ ಸಮರ್ಥಿಸಿಕೊಂಡದ್ದರು. ‘ಕರ್ನಾಟಕದಲ್ಲಿರುವ ಕನ್ನಡ ಸಂಘಟನೆಗಳು ನಾಲಾಯಕ್’ ಎಂದು ವಿವಾದಾತ್ಮಕವಾಗಿ ಹೇಳಿಕೆ ಕೊಟ್ಟು, ಕನ್ನಡಿಗರು ಮತ್ತು ಮರಾಠಿಗರ ನಡುವಿನ ಸೌಹಾರ್ದತೆ ಕದಡಲು ಯತ್ನಿಸಿದ್ದರು ಎಂಬ ಆರೋಪದಡಿ ಮಾಳಮಾರುತಿ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.

ಅಲ್ಲದೇ, ಮರಾಠಿ ಭಾಷೆಯಲ್ಲಿಯೇ ಮಾತನಾಡುವಂತೆ ಕಿಣಿಯೆ ಗ್ರಾಮದ ಪಿಡಿಒಗೆ ಬೆದರಿಕೆ ಹಾಕಿದ ತಿಪ್ಪಣ್ಣ ಡೋಕ್ರೆ ಎಂಬಾತನನ್ನು ಸನ್ಮಾನಿಸಿದ್ದರು. ಮೇಲಿಂದ ಮೇಲೆ ಕನ್ನಡ ವಿರೋಧಿ ಹಾಗೂ ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ.
.ಬೆಳಗಾವಿ: ಮಹಾರಾಷ್ಟ್ರ ನಾಯಕರ ಪ್ರವೇಶ ನಿರ್ಬಂಧಿಸಲು ಕನ್ನಡ ಸಂಘಟನೆ ಮುಖಂಡರ ಆಗ್ರಹ.ಕನ್ನಡ ಭಾಷೆ ನೆಲ ಜಲಕ್ಕೆ ಅನ್ಯಾಯವಾದರೆ ಕನ್ನಡ ಪರ ಸಂಘಟನೆ ನಿಲ್ಲುತ್ತದೆ:ಬಾಲಕೃಷ್ಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.