ಬೆಳಗಾವಿ: ಬೆಳಗಾವಿಯ ಭಾಗ್ಯ ನಗರದ 9ನೇ ಕ್ರಾಸ್ ಮನೆಯಲ್ಲಿ ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ, ರಮೇಶ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ ಜವಳಕರ್ ಅವರನ್ನು ಟಿಳಕವಾಡಿ ಠಾಣೆ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.
.ಬೆಳಗಾವಿ ಪಾಲಿಕೆ ಬಿಜೆಪಿ ಸದಸ್ಯನ ಬಂಧನ: ಮಾಹಿತಿ ಪಡೆದ ಬಿ.ವೈ ವಿಜಯೇಂದ್ರ.
'ಮೊಬೈಲ್ ಟವರ್ ಅಳವಡಿಸುವುದನ್ನು ತಡೆಯುವ ಜತೆಗೆ, ರಮೇಶ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅಭಿಜಿತ ಬಂಧಿಸಲಾಗಿದೆ' ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ರಾಮಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.

ಮೊಬೈಲ್ ಟವರ್ ಅಳವಡಿಕೆ ವಿಚಾರವಾಗಿ ನ.23ರಂದು ಪರಸ್ಪರರ ಮಧ್ಯೆ ಗಲಾಟೆ ನಡೆದಿತ್ತು. ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಮಣಿದ ಪೊಲೀಸರು, ರಮೇಶ ಪಾಟೀಲ ಅವರನ್ನು ಅಂದೇ ಬಂಧಿಸಿದ್ದರು.

ಅಭಿಜಿತ ಅವರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಕಾರ್ಯಕರ್ತರು ಭಾನುವಾರ ಸಂಜೆ ಟಿಳಕವಾಡಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಹಾಗಾಗಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿಜಿತ ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.