ಬೆಳಗಾವಿ: ‘ಕೇಂದ್ರ ಸರ್ಕಾರ ನಮ್ಮ ಮೇಲೆ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ಮಾಡುತ್ತಿದೆ’ ಎಂದು ಆರೋಪಿಸಿ, ಇಲ್ಲಿನ ರೈಲ್ವೆ ನಿಲ್ದಾಣ ಬಳಿಯ ಗೋಗಟೆ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ರಸ್ತೆ ಮಧ್ಯದಲ್ಲೇ ಧರಣಿಗೆ ಕುಳಿತ ಪ್ರತಿಭಟನಕಾರರು, ಕೇಂದ್ರದ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಅದೇ ವೃತ್ತದಲ್ಲಿ ಅಳವಡಿಸಿದ್ದ ಮರಾಠಿ ಭಾಷೆಯಲ್ಲಿದ್ದ ರಾಜಕೀಯ ಪಕ್ಷವೊಂದರ ಬ್ಯಾನರ್ ಅನ್ನು ಕಾರ್ಯಕರ್ತನೊಬ್ಬ ಹರಿದುಹಾಕಿದರು. ಆಗ ಎಲ್ಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ, ಪರಸ್ಪರರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ‘ಪ್ರತಿವರ್ಷ ಸೆ.14ರಂದು ಕೇಂದ್ರ ಸರ್ಕಾರವು ಹಿಂದಿ ದಿವಸ್ ಆಚರಿಸುತ್ತದೆ. ಹಿಂದಿಗೆ ಪ್ರಾಧಾನ್ಯತೆ ಕೊಡುತ್ತಿರುವ ಕೇಂದ್ರ, ನಮ್ಮ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ನಮ್ಮ ಮೇಲೆ ಹಿಂದಿ ಹೇರಿಕೆ ನಿಲ್ಲಬೇಕು. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಇಲ್ಲಿನ ಎಲ್ಲ ಕಚೇರಿಗಳಲ್ಲೂ ಕನ್ನಡದಲ್ಲೇ ಪತ್ರ ವ್ಯವಹಾರ ನಡೆಸಬೇಕು’ ಎಂದು ಆಗ್ರಹಿಸಿದರು. ಮುಖಂಡರಾದ ಸುರೇಶ ಗವನ್ನವರ, ಗಣೇಶ ರೋಕಡೆ, ಹೊಳೆಪ್ಪ ಸುಲಧಾಳ, ಜಗದೀಶ ಮಾಳಗಿ, ಕಣ್ಣಯ್ಯ ನಾಯ್ಕ, ಶೇಖರ ರಾಠೋಡ, ಮಂಜುನಾಥ ರಾಠೋಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.