ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ದರೋಡೆ ಪ್ರಕರಣ: 27 ವರ್ಷಗಳ ಬಳಿಕ ಆರೋಪಿ ಬಂಧನ

Published 21 ಮಾರ್ಚ್ 2024, 15:40 IST
Last Updated 21 ಮಾರ್ಚ್ 2024, 15:40 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿಯ ಮಾಳಮಾರುತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣವೊಂದರ ಪ್ರಮುಖ ಆರೋಪಿಯನ್ನು 27 ವರ್ಷಗಳ ನಂತರ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೀದರ್‌ ಜಿಲ್ಲೆಯ ಮುಧೋಳ ತಾಂಡಾ ನಿವಾಸಿ ಕಿಶನ್‌ ಹಂಕು ಜಾಧವ ಬಂಧಿತ.

‘1997ರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ 14 ಆರೋಪಿಗಳಲ್ಲಿ ಕಿಶನ್‌ ಪ್ರಮುಖವಾಗಿದ್ದ. ಕೆಲಕಾಲ ಪೊಲೀಸರ ವಶದಲ್ಲಿದ್ದ ಈತ ಜಾಮೀನು ಪಡೆದು ಹೊರಬಂದಿದ್ದ. ಮರಳಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ. ಆರೋಪಿಯ ಸುಳಿವು ಪತ್ತೆ ಮಾಡಿ ಬೀದರ್‌ನಲ್ಲಿ ಬಂಧಿಸಿದ್ದೇವೆ. ಪಿಎಸ್‌ಐ ಮನೋಹರ ಮಲ್ಲಿಗವಾಡ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ಮಾಳಮಾರುತಿ ಠಾಣೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.

ಇಲ್ಲಿನ 1ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಮಾರ್ಚ್‌ 21ರಂದು ಕಿಶನ್‌ನನ್ನು ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ, ಆತನಿಗೆ ಮತ್ತೆ ಮೂರು ವರ್ಷ ಶಿಕ್ಷೆ ಮತ್ತು ₹1,000 ದಂಡ ವಿಧಿಸಿದೆ. ದಂಡ ತುಂಬದಿದ್ದರೆ, ಮತ್ತೆ ಮೂರು ತಿಂಗಳ ಕಾರಾಗೃಹ ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ. ಆತನನ್ನು ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT