ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಗುಡಿಸಿಲಿಗೆ ಬೆಂಕಿ: ₹50 ಸಾವಿರ ನೆರವು ನೀಡಿದ ಲಕ್ಷ್ಮಿ ಹೆಬ್ಬಾಳಕರ

Published 4 ಮೇ 2024, 4:58 IST
Last Updated 4 ಮೇ 2024, 4:58 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಯಲ್ಲಪ್ಪ ಭೀಮಪ್ಪ ರಾಮಣ್ಣವರ ಎಂಬುವರ ಗುಡಿಸಿಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಕುಟುಂಬಕ್ಕೆ ಸಾಂತ್ವನ ಹೇಳಿದರು. ವೈಯಕ್ತಿಕ ₹50 ಸಾವಿರ ನೆರವು ನೀಡಿದರು.

ಅನಾಹುತದಿಂದಾಗಿ ಶೆಡ್‌ನಲ್ಲಿದ್ದ ಚಿನ್ನ, ಬೆಳ್ಳಿ, ₹2.50 ಲಕ್ಷ ಹಣ, ಮನೆಯಲ್ಲಿನ ದಿನಬಳಕೆಯ ವಸ್ತುಗಳು ಸುಟ್ಟು ನಾಶವಾಗಿವೆ.  ಯಲ್ಲಪ್ಪ ಭೀಮಪ್ಪ ರಾಮಣ್ಣವರ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಹೀಗಾಗಿ ಇಡೀ ಕುಟುಂಬ ಗುಡಿಸಿಲಿಗೆ ಸ್ಥಳಾಂತರಗೊಂಡಿತ್ತು. ಹಣ, ಒಡವೆ ಎಲ್ಲವೂ ಮನೆಯಲ್ಲಿದ್ದವು. ಆದರೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕುಟುಂಬ ಎಲ್ಲವನ್ನೂ ಕಳೆದುಕೊಂಡಿದೆ. ಕುಟುಂಬದ ರೋದನ ಮುಗಿಲುಮುಟ್ಟಿತ್ತು.

ಚುನಾವಣೆ ಪ್ರಚಾರದಲ್ಲಿದ್ದ ಸಚಿವೆ ಹೆಬ್ಬಾಳಕರ್ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದರು. ಕಷ್ಟದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಿ, ನಿಮ್ಮ ಜೊತೆಗೆ ನಾನಿದ್ದೇನೆ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT