ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) 25ನೇ ವಾರ್ಷಿಕ ಘಟಿಕೋತ್ಸವ (ಭಾಗ–1) ಜುಲೈ 4ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ಮೂವರಿಗೆ ಗೌರವ ಡಾಕ್ಟರೇಟ್ ಮತ್ತು 60,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.

‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಡಾ.ವಿ.ನಾರಾಯಣನ್, ಎಕ್ಸೆಲ್ ಇಂಡಿಯಾ ಸಂಸ್ಥಾಪಕ ಪ್ರಶಾಂತ್ ಪ್ರಕಾಶ್ ಮತ್ತು ಬೆಂಗಳೂರಿನ ಏಟ್ರಿಯ ವಿಶ್ವವಿದ್ಯಾಲಯದ ಕುಲಾಧಿಪತಿ ಸಿ.ಎಸ್.ಸುಂದರ್ ರಾಜು ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಪ್ರದಾನ ಮಾಡಲಾಗುವುದು’ ಎಂದು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ ಹೇಳಿದರು.

‘ಕೇಂದ್ರದ ಪ್ರಧಾನ ವೈದ್ಯಕೀಯ ಸಲಹೆಗಾರ ಪ್ರೊ.ಅಜಯ್ಕುಮಾರ್ ಸೂದ್, ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಾಲ್ಗೊಳ್ಳುವರು’ ಎಂದು ವಿವರಿಸಿದರು.

‘2025–26ನೇ ಸಾಲಿನಿಂದ ಸ್ನಾತಕ ಕೋರ್ಸ್ಗಳ ಪಠ್ಯಕ್ರಮ ಬದಲಿಸಿದ್ದೇವೆ. ಪ್ರಸ್ತುತ ಕೈಗಾರಿಕೆಗಳು ಬಯಸುವ, ಕೌಶಲ ಆಧಾರಿತ ಪಠ್ಯಕ್ರಮ ದೇಶದಲ್ಲೇ ಮಾದರಿಯಾಗಿದೆ. ವಿವಿಧ ಕ್ಷೇತ್ರದವರ ಜೊತೆ ಚರ್ಚಿಸಿ ಇದನ್ನು ರೂಪಿಸಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.