ಹುಬ್ಬಳ್ಳಿ: ಗುಡ್ ಫ್ರೈಡೆ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.

ಏಪ್ರಿಲ್ 2ರಂದು ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಡುವ ರೈಲು (06503), ಮರುದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿಗೆ ತಲುಪಲಿದೆ. ಅದೇ ರೀತಿ ಏಪ್ರಿಲ್ 5ರಂದು ಸಂಜೆ 5.30ಕ್ಕೆ ಬೆಳಗಾವಿ ನಿಲ್ದಾಣದಿಂದ ಹೊರಡುವ ರೈಲು (06504), ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್ಎಂವಿಟಿ ನಿಲ್ದಾಣ ಆಗಮಿಸಲಿದೆ.

ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಹಾಗೂ ಖಾನಾಪುರ ನಿಲ್ದಾಣಗಳ ಮೂಲಕ ಈ ರೈಲುಗಳು ಸಂಚರಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-24-813360613

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.