ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟಿಯು: ಬೆಂಗಳೂರಿನ ಸಾಯಿರಾಮ್ ಕಾಲೇಜಿಗೆ ಪ್ರಶಸ್ತಿ

ಸೆಮಿನಾರ್‌, ಪ್ರಾಜೆಕ್ಟ್‌ ಪ್ರದರ್ಶನ ಸಂಪನ್ನ
Last Updated 14 ಆಗಸ್ಟ್ 2022, 4:05 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ) ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ ವಿದ್ಯಾರ್ಥಿ ಯೋಜನಾ ಕಾರ್ಯಕ್ರಮದ (45ನೇ ಸರಣಿ) ಪ್ರಾಜೆಕ್ಟ್‌ಗಳ ಸೆಮಿನಾರ್- ಪ್ರದರ್ಶನ ಶನಿವಾರ ಸಮಾರೋಪಗೊಂಡಿತು.

ಬೆಂಗಳೂರಿನ ಸಾಯಿರಾಮ್ ಎಂಜಿನಿಯರಿಂಗ್ ಕಾಲೇಜು ‘ಬೆಸ್ಟ್ ಪರ್ಫಾರ್ಮೆನ್ಸ್‌’ ಪ್ರಶಸ್ತಿ ಬಾಚಿಕೊಂಡಿತು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಅತ್ಯುತ್ತಮ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ ನೀಡಲಾಯಿತು. ಇಲ್ಲಿ 330ಕ್ಕೂ ಅಧಿಕ ಪ್ರಾಜೆಕ್ಟ್‌ಗಳು ಪ್ರದರ್ಶನಗೊಂಡವು.

ಕುಲಪತಿ ಪ್ರೊ.ಕರಿಸಿದ್ದಪ್ಪ, ಕೆಎಸ್‌ಸಿಎಸ್‌ಟಿ ಕಾರ್ಯದರ್ಶಿ ಪ್ರೊ.ಅಶೋಕ್ ರಾಯಚೂರು ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯನಿರ್ವಾಹಕ ಕಾರ್ಯದರ್ಶಿ ಹೇಮಂತ್‌ಕುಮಾರ್ ವರದಿ ಮಂಡಿಸಿದರು. ಪ್ರೊ.ಅಮೃತೂರ ಭಾರದ್ವಾಜ್ ತಾಂತ್ರಿಕ ಉಪನ್ಯಾಸ ನೀಡಿದರು.ಕುಲಸಚಿವ ಪ್ರೊ.ಎ.ಎಸ್.ದೇಶಪಾಂಡೆ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಈ.ರಂಗಸ್ವಾಮಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT