ಕೌಜಲಗಿ: ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಜಿ.ಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರ ಮಾರ್ಗದರ್ಶನದಂತೆ ಸಮೀಪದ ತಪಸಿ ಗ್ರಾಮ ಪಂಚಾಯ್ತಿ 2ನೇ ಅವಧಿಗೆ ಈಚೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು.
ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಾಗಿದ್ದ ಇಲ್ಲಿಯ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಭಾಗವ್ವ ಗಲಗಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ್ದರಿಂದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಚುನಾವಣೆ ಮುಂದೂಡಲಾಗಿದೆ ಎಂದು ಚುನಾವಣಾಧಿಕಾರಿ ಗೋಕಾಕ ಜಲಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಘುರಾಮ ಎಸ್.ಬಿ. ತಿಳಿಸಿದ್ದಾರೆ.