ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥಣಿ: ‘ಭಾಗ್ಯಲಕ್ಷ್ಮಿ’ ಬಾಂಡ್ ವಿತರಣೆ

Last Updated 24 ಜೂನ್ 2019, 14:25 IST
ಅಕ್ಷರ ಗಾತ್ರ

ಅಥಣಿ: ‘ಹೆಣ್ಣು ಭ್ರೂಣ ಹತ್ಯೆಯಂತಹ ಕೃತ್ಯಗಳು ನಿಲ್ಲಬೇಕು’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯ್ತಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವತಿಯಿಂದ ಹೆಣ್ಣು ಮಕ್ಕಳಿಗೆ ‘ಭಾಗ್ಯಲಕ್ಷ್ಮಿ’ ಬಾಂಡ್ ವಿತರಣೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಹೆಣ್ಣಿಗೆ ಸಮಾಜದಲ್ಲಿ ಸ್ಥಾನಮಾನ ಸಿಗಬೇಕು. ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು ಎಂಬ ಸದುದ್ದೇಶದಿಂದ ಸರ್ಕಾರವು ‘ಭಾಗ್ಯಲಕ್ಷ್ಮಿ’ ಮೊದಲಾದ ಯೋಜನೆ ಜಾರಿಗೊಳಿಸಿದೆ’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯ್ತಿ ಇಒ ರವಿ ಬಂಗಾರೆಪ್ಪನವರ ಮಾತನಾಡಿದರು. ಜಿಲ್ಲಾ ‍ಪಂಚಾಯ್ತಿ ಸದಸ್ಯೆ ಭಾರತಿ ಬುಟಾಳಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಕವಿತಾ ನಾಯಿಕ, ಉಪಾಧ್ಯಕ್ಷೆ ಜ್ಯೋತಿ ಪಾಟೀಲ, ಪ್ರಭಾರ ಸಿಡಿಪಿಒ ಉದಯ ಪಾಟೀಲ, ಮೇಲ್ವಿಚಾರಕಿಯರಾದ ಸುಜಾತಾ ಪಾಟೀಲ, ಜ್ಯೋತಿ ಚವಾಣ, ಶೋಭಾ ಪರೀಟ, ಶೈಲಶ್ರೀ ಇಂಗಳೇಶ್ವರ, ರಜನಿ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT