ಗುರುವಾರ , ಡಿಸೆಂಬರ್ 1, 2022
20 °C

ಅಪಘಾತ: ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಬೋರಗಾಂವ ಗ್ರಾಮದ ಹೊರವಲಯದಲ್ಲಿ ಬುಧವಾರ ಬೈಕ್‌ ಹಾಗೂ ಮ್ಯಾಕ್ಸಿಕ್ಯಾಬ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮ ಕೃಷ್ಣ ಸನದಿ (32) ಮೃತಪಟ್ಟವರು. ರಾಮ ಅವರು ಇಚಲಕರಂಜಿಯಿಂದ ಬೋರಗಾಂವ ಗ್ರಾಮಕ್ಕೆ ಬೈಕಿನ ಮೇಲೆ ಬರುತ್ತಿದ್ದರು. ಎದುರಿನಿಂದ ಬಂದ ಮ್ಯಾಕ್ಸಿಕ್ಯಾಬ್‌ ವಾಹನ ಬೈಕಿಗೆ ಡಿಕ್ಕಿ ಹೊಡೆಯಿತು. ತೀವ್ರ ರಕ್ತಸ್ರಾವದಿಂದ ರಾಮ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಡಿವೈಎಸ್‌ಪಿ ಬಸವರಾಜ ಯಲಿಗಾರ, ಸದಲಗಾ ಪಿಎಸ್‌ಐ ಎಚ್‌.ಭರತಗೌಡ ಸ್ಥಳ ಪರಿಶೀಲನೆ ನಡೆಸಿದರು. ಸದಲಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು