ಗುರುವಾರ , ಮೇ 13, 2021
19 °C

ಜಿಲ್ಲಾಸ್ಪತ್ರೆ: ಒಪಿಡಿ 3 ದಿನ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ (ಬಿಮ್ಸ್ ಬೋಧಕ) ಆಸ್ಪತ್ರೆಯಲ್ಲಿರುವ ತುರ್ತು ಚಿಕಿತ್ಸಾ ವಿಭಾಗ/ ಶಸ್ತ್ರಚಿಕಿತ್ಸಾ ವಿಭಾಗದಲ್ಲಿನ ಕೋವಿಡ್-19 ರೋಗಿಗಳನ್ನು ಏ.23ರಿಂದ ವೈದ್ಯಕೀಯ ವಿಭಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಬಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ.

‘ಎಲ್ಲ ರೋಗಿಗಳನ್ನು ಸ್ಥಳಾಂತರಿಸಿದ ಬಳಿಕ ಆ ವಿಭಾಗದಲ್ಲಿ ಹೊರ ರೋಗಿಗಳ ವಿಭಾಗ (ಒ‍ಪಿಡಿ)ವನ್ನು ಏ. 26ರಿಂದ ಪ್ರಾರಂಭಿಸಲಾಗುವುದು. ತುರ್ತುಚಿಕಿತ್ಸಾ ವಿಭಾಗ/ಶಸ್ತ್ರಚಿಕಿತ್ಸಾ ವಿಭಾಗವನ್ನು ಶುಚಿಗೊಳಿಸಿ, ಸ್ಯಾನಿಟೈಸ್ ಮಾಡಲಾಗುವುದರಿಂದ ಏ. 23ರಿಂದ 25ರವರೆಗೆ ತುರ್ತು ವೈದ್ಯಕೀಯ ಚಿಕಿತ್ಸೆ ಹೊರತುಪಡಿಸಿ ಹೊರ ರೋಗಿಗಳ ವಿಭಾಗವನ್ನು ಸ್ಥಗಿತಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

‘ಬಿಮ್ಸ್ ಆಸ್ಪತ್ರೆ ಮೆಡಿಕಲ್ ಬ್ಲಾಕ್‌ನಲ್ಲಿ ಒಟ್ಟು 300 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸೋಂಕಿತರಿಗೆ 200 ಮತ್ತು 100 ಹಾಸಿಗೆಗಳನ್ನು ‘ಸಾರಿ’ (ತೀವ್ರ ಉಸಿರಾಟದ ತೊಂದರೆ ಇರುವವರು) ರೋಗಿಗಳಿಗೆ ಒದಗಿಸಲಾಗುವುದು. 20 ಹಾಸಿಗೆಗಳನ್ನು ಐಸಿಯುನಲ್ಲಿ ಅಳವಡಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು