ಬುಧವಾರ, ಜನವರಿ 22, 2020
21 °C

ಪೌರತ್ವ ಕಾಯ್ದೆ; ಜಾಗೃತಿ ಸಭೆ 11ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಪೌರತ್ವ ಕಾಯ್ದೆ (ತಿದ್ದುಪಡಿ) ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನಗರದ ಸರ್ದಾರ್‌ ಮೈದಾನದಲ್ಲಿ ಇದೇ 11ರಂದು ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೇಂದ್ರದ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್‌ ಠಾಕೂರ್‌, ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ’ ಎಂದು ಶಾಸಕ ಅನಿಲ ಬೆನಕೆ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ದೇಶದ ನಾಗರಿಕರಿಗೆ ಭದ್ರತೆ ಹಾಗೂ ಸೌಲಭ್ಯ ಕಲ್ಪಿಸುವುದು ಹಾಗೂ ಅಕ್ರಮವಾಗಿ ಬಂದಿರುವ ವಲಸಿಗರನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ದೇಶದೆಲ್ಲೆಡೆ ಹಮ್ಮಿಕೊಳ್ಳಲಾಗಿದೆ. ಇದರ ನಗರದಲ್ಲಿಯೂ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಸಂಜಯ ಪಾಟೀಲ ಮಾತನಾಡಿ, ‘ಕಾಯ್ದೆಯ ಬಗ್ಗೆ ವಿರೋಧ ಪಕ್ಷದವರು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹಾಗೂ ಕಾಯ್ದೆಯ ನಿಜವಾದ ಸ್ವರೂಪವನ್ನು ಜನರ ಮುಂದೆ ಇಡಲು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

‘ಲೋಕಸಭಾ ಚುನಾವಣೆಗಿಂತ ಮುಂಚೆ ಬಿಜೆಪಿ ನೀಡಿದ ಭರವಸೆಯಂತೆ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತ್ರಿವಳಿ ತಲಾಖ್‌ ನಿಷೇಧ, ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದು ಸೇರಿದಂತೆ ಹಲವು ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಿದೆ’ ಎಂದರು.

ಬೆಳಗಾವಿ ಜಿಲ್ಲಾ (ಗ್ರಾಮೀಣ) ಬಿಜೆಪಿ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಬೆಳಗಾವಿ ನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ಬುಡಾ ಅಧ್ಯಕ್ಷ ಫೂಳಪ್ಪ ಹೊಸಮನಿ, ರಾಜು ಚಿಕ್ಕನಗೌಡರ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು