ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ.17ರಂದು ಅಮಿತ್ ಶಾ ಭಾಷಣ

Last Updated 8 ಜನವರಿ 2021, 13:05 IST
ಅಕ್ಷರ ಗಾತ್ರ

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜ. 17ರಂದು ಮಧ್ಯಾಹ್ನ 3ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಾಗಿ ಮುಖಂಡರು ತಾಲ್ಲೂಕಿನ ಕಾಕತಿಯ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಸಭೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು.

ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕರಾದ ಉಮೇಶ್ ಕತ್ತಿ, ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಮಹೇಶ್ ಕುಮಠಳ್ಳಿ, ಪಿ. ರಾಜೀವ್, ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್ ನೀರ್ಲಿ, ಪ್ರಭಾರಿ ಜಗದೀಶ್ ಕವಟಗಿ, ಸಹ ಪ್ರಭಾರಿ ಬಸವರಾಜ ಯಂಕಂಚಿ, ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಅಕ್ಕಲಕೋಟ, ರಾಜ್ಯ ಘಟಕದ ಕಾರ್ಯದರ್ಶಿ ಉಜ್ವಲಾ ಬಡವನಾಚೆ, ಮಹಾನಗರ ಘಟಕದ ವಕ್ತಾರ ಹಣಮಂತ ಕೊಂಗಾಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT