ಬಿಜೆಪಿ: ಎಲ್‌ಇಡಿ ಪರದೆಯಲ್ಲಿ ಪ್ರಚಾರಕ್ಕೆ ಚಾಲನೆ

ಶುಕ್ರವಾರ, ಏಪ್ರಿಲ್ 19, 2019
27 °C

ಬಿಜೆಪಿ: ಎಲ್‌ಇಡಿ ಪರದೆಯಲ್ಲಿ ಪ್ರಚಾರಕ್ಕೆ ಚಾಲನೆ

Published:
Updated:
Prajavani

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳು, ಸಾಧನೆಗಳ ಬಗ್ಗೆ ಎಲ್‌ಇಡಿ ಸ್ಕ್ರೀನ್ ಮೂಲಕ ಮಾಹಿತಿ ನೀಡುವ ವಾಹನಗಳಿಗೆ ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಶುಕ್ರವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಮೋದಿ ಅಧಿಕಾರಕ್ಕೆ ಬಂದರೆ ದೇಶವನ್ನೇ ಬಿಡುತ್ತೇನೆ ಎಂದು 2014ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಈಗ ಅವರ ಪುತ್ರ, ಲೋಕೋಪಯೊಗಿ ಸಚಿವ ರಾಜಕೀಯ ನಿವೃತಿ ಪಡೆಯುತ್ತೇನೆ ಎಂದು ಹೇಳಿದ್ದರೆ. ಇದು ಹಾಸ್ಯಾಸ್ಪದವಾಗಿದೆ. ಜೆಡಿಎಸ್‌ ಅನ್ನು ಜನರೇ ತಿರಸ್ಕಾರ ಮಾಡಿ, ಕಸದ ತೊಟ್ಟಿಗೆ ಹಾಕಲಿದ್ದಾರೆ. ಆಗ ರೇವಣ್ಣ ರಾಜಕೀಯ ನಿವೃತ್ತಿ ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ತಿರುಗೇಟು ನೀಡಿದರು.

‘ಹಲವು ದಶಕಗಳಿಂದ ಕಾಂಗ್ರೆಸ್ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೆಲವೇ ವರ್ಷಗಳಲ್ಲಿ ಮೋದಿ ಮಾಡಿ ತೋರಿಸಿದ್ದಾರೆ. ಜನರ ಮನ ಗೆದಿದ್ದಾರೆ’ ಎಂದರು.

ಮುಖಂಡರಾದ ರಾಜು ಚಿಕ್ಕನಗೌಡರ, ಈರಪ್ಪ ಅಂಗಡಿ, ವಿಜಯ ಗುಡದರಿ, ಯಲ್ಲೇಶ ಕೋಲಕಾರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !