ಭಾನುವಾರ, ಮಾರ್ಚ್ 26, 2023
31 °C

ಕುಮಾರಸ್ವಾಮಿ ರಾಜೀನಾಮೆಗೆ ಬಿಜೆಪಿ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿರುವುದರಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಿ, ಅಧಿಕಾರದಿಂದ ಕೆಳಗಿಳಿಯಬೇಕು’ ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಿದ ಅವರು,‌ ‘12 ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರಕ್ಕೆ ಬಹುಮತ ಇಲ್ಲವಾಗಿದೆ. ಹೀಗಾಗಿ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು’ ಎಂದು ಆಗ್ರಹಿಸಿದರು.

ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಿ.ಐ. ಪಾಟೀಲ, ಮುಖಂಡರಾದ ರಾಜು ಚಿಕ್ಕನಗೌಡರ, ಶ್ರೀನಿವಾಸ ಬೀಸನಕೊಪ್ಪ,‌ ಧನಂಜಯ ಜಾಧವ, ಶ್ರೀನಿವಾಸ ಪಾಟೀಲ, ಲೀನಾ ಟೋಪಣ್ಣವರ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು