ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದುಳಿದ ವರ್ಗಕ್ಕೆ ಸ್ಥಾನಮಾನ ನೀಡಿದ ಬಿಜೆಪಿ’

Last Updated 10 ಆಗಸ್ಟ್ 2021, 14:20 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜಕೀಯ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ಸ್ಥಾನಮಾನ ಕೊಡುವ ಜೊತೆಗೆ ಎಲ್ಲರೊಂದಿಗೆ ಎಲ್ಲರ ವಿಕಾಸ ಎಂಬ ತತ್ವವನ್ನು ಅಕ್ಷರಶಃ ಅನುಷ್ಠಾನಕ್ಕೆ ತಂದ ಕೀರ್ತಿ ಭಾರತೀಯ ಜನತಾ ಪಕ್ಷಕ್ಕೆ ಸಲ್ಲುತ್ತದೆ’ ಎಂದು ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.

ನಗರದ ಗೋಮಟೇಶ್ವರ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

‘ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹೆಸರಿನ ಮೇಲೆ‌ ದೇಶದಲ್ಲಿ 70 ವರ್ಷ ರಾಜಕಾರಣ ಮಾಡಿದವರು, ಬಡತನ ನಿವಾರಣೆಗೆ ಏನನ್ನೂ ಮಾಡಲಿಲ್ಲ. ಆ ಕೊರಗನ್ನು ಹೋಗಲಾಡಿಸಲು ಈಗಿನ ಪ್ರಧಾನಿ ನರೇಂದ್ರ ಮೋದಿ ಪರಿಶ್ರಮಪಡುತಿದ್ದಾರೆ’ ಎಂದರು.

ಒಬಿಸಿ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬ, ಕಾರ್ಯದರ್ಶಿ ಕಿರಣ ಜಾಧವ ಮಾತನಾಡಿದರು. ಮುಖಂಡರಾದ ಬಸವರಾಜ ಮಾಳೆದೆನ್ನವರ, ಸತೀಶ ಶೇಡವಾಜ್ಕರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಮೊಹಿತೆ, ಸುಭಾಷ್ ಪಾಟೀಲ, ಸಂದೀಪ ದೇಶಪಾಂಡೆ ಪಾಲ್ಗೊಂಡಿದ್ದರು.

ಈರಣ್ಣ ಬಡಿಗೇರ ಸ್ವಾಗತಿಸಿದರು. ಸಂತೋಷ ಹಡಪದ ನಿರೂಪಿಸಿದರು. ಉಮೇಶ ಪೂರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT