ಬುಧವಾರ, ಆಗಸ್ಟ್ 12, 2020
27 °C

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಶಾಸಕ ಅನಿಲ ಬೆನಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಯೋಜನೆಗಳ ಲಾಭ ಫಲಾನುಭವಿಗಳೆಲ್ಲರಿಗೂ ತಲುಪಿದರೆ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಅನಿಲ ಬೆನಕೆ ಹೇಳಿದರು.

ಇಲ್ಲಿನ ನಗರಪಾಲಿಕೆಯಲ್ಲಿ ಬುಧವಾರ ಲೀಡ್‌ ಬ್ಯಾಂಕ್‌ ಜಿಲ್ಲಾ ಮುಖ್ಯ ವ್ಯವಸ್ಥಾಪಕರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ‘ಆತ್ಮನಿರ್ಭರ ಭಾರತ ನಿರ್ಮಾಣ’ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಸ್ವಾವಲಂಬಿಯಾಗಿಸಲು ಮುದ್ರಾ, ಎಂಎಸ್‌ಎಂಇಗೆ ನೆರವು, ಪಿಎಂಇಜಿಪಿ, ಸ್ಟಾರ್ಟ್‌ ಅಪ್‌ ಇಂಡಿಯಾ, ಸ್ಟಾಂಡ್ ಆಪ್ ಇಂಡಿಯಾ, ಮೆಕ್ ಇನ್ ಇಂಡಿಯಾ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲು ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಪಕ್ಷದ ಕಾರ್ಯಕರ್ತರು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಸೇತುವೆಯಾಗಿ ಕಾರ್ಯನಿರ್ವಹಿಸಬೇಕು’ ಎಂದರು.

‘ಕೊರೊನಾ ಸೋಂಕಿನಿಂದಾಗಿ ದೇಶದಲ್ಲಿ ಅನೇಕರು ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗುತ್ತಿದ್ದಾರೆ. ಯುವಕರು ಸ್ವಯಂ ಉದ್ಯೋಗದ ಕಡೆ ಗಮನಹರಿಸಿಬೇಕು’ ಎಂದು ಹೇಳಿದರು.

‘ಜನರು ಜನ್‌ಧನ್‌ ಖಾತೆ ತೆರೆದು ಉಪಯೋಗ ಪಡೆದುಕೊಳ್ಳಬೇಕು. ಯುವಕರು ಸ್ವಾವಲಂಬಿಗಳಾಗಲು ಸ್ವಯಂ ಉದ್ಯೋಗ ನಡೆಸಲು ಬ್ಯಾಂಕ್‌ಗಳು ನೆರವಾಗಬೇಕು. ಹೆಲ್ಪ್‌ ಡೆಸ್ಕ್‌ ಆರಂಭಿಸಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು