ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃಷಿಕರ ಪರವಿರುವ ಕೇಂದ್ರ, ರಾಜ್ಯ ಸರ್ಕಾರ’

Last Updated 20 ಅಕ್ಟೋಬರ್ 2020, 15:19 IST
ಅಕ್ಷರ ಗಾತ್ರ

ಗೋಕಾಕ: ‘ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಸಂಬಂಧಿತ ತಿದ್ದುಪಡಿ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದೆ. ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೃಷಿ ಉತ್ಪನ್ನಗಳು, ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ರೈತರ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಮಾಡಿದೆ. ಕೃಷಿಯೇತರ ಭೂಮಿ ಖರೀದಿಸಲು ಅವಕಾಶ, ಹೈನೋದ್ಯಮ, ಕುರಿ, ಮೇಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸಬುಗಳಲ್ಲಿ ಯುವಕರು ತೊಡಗಿಸಿಕೊಳ್ಳಲು ಅವಕಾಶವಿದೆ. ಪ್ರತಿ ವರ್ಷ ಕೃಷಿ ವಿಶ್ವವಿದ್ಯಾಲಯದಿಂದ ಹೊರಬರುವ ನಾಲ್ಕು ಸಾವಿರ ಪದವೀಧರರಿಗೆ ಕೃಷಿ ಭೂಮಿ ಖರೀದಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳಲೂ ಅವಕಾಶವಿದೆ. ಕೃಷಿಕರಿಗೆ ವರದಾನವಾಗಿವೆ’ ಎಂದರು.

ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಾಳೇದವರ, ರೈತ ಮೋರ್ಚಾ ಕಾರ್ಯದರ್ಶಿ ಆನಂದ ಮೂಡಲಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT